ಅಥಣಿಯಲ್ಲಿ ಮರಳು ದಂಧೆ: ತಹಶೀಲ್ದಾರ್‌ ಮೇಲೆ ಟ್ರ್ಯಾಕ್ಟರ್ ಬಿಟ್ಟ ದುರುಳ

ಬೆಳಗಾವಿ: ಮರಳು ದಂಧೆ ತಡೆಯಲು ಹೋದ ತಹಶೀಲ್ದಾರ್ ಕಾರಿನ ಮೇಲೆ ಖದೀಮರು ಟ್ರ್ಯಾಕ್ಟರ್ ಹತ್ತಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರೂರು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅಪಾಯದಿಂದ ಪಾರಾಗಿದ್ದಾರೆ. ಲಾಕ್​ಡೌನ್ ಇದ್ದರೂ ಶಿರೂರು ಗ್ರಾಮದ ಬಳಿ ಅಕ್ರಮವಾಗಿ ಹಳ್ಳದಿಂದ ಮರಳು ತೆಗೆಯುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ದಾಳಿ ನಡೆಸಿದ್ದಾರೆ. ಈ ವೇಳೆ ತಹಶೀಲ್ದಾರ್ ಕಾರಿಗೆ ಟ್ರ್ಯಾಕ್ಟರ್ ಗುದ್ದಿಸಿ ಮರಳು ದಂಧೆಕೋರ ಬಾಳು ಹಾಜಾರೆ ಪರಾರಿಯಾಗಿದ್ದಾನೆ. […]

ಅಥಣಿಯಲ್ಲಿ ಮರಳು ದಂಧೆ: ತಹಶೀಲ್ದಾರ್‌ ಮೇಲೆ  ಟ್ರ್ಯಾಕ್ಟರ್ ಬಿಟ್ಟ ದುರುಳ
ಸಾಧು ಶ್ರೀನಾಥ್​

Updated on: Apr 29, 2020 | 4:51 PM

ಬೆಳಗಾವಿ: ಮರಳು ದಂಧೆ ತಡೆಯಲು ಹೋದ ತಹಶೀಲ್ದಾರ್ ಕಾರಿನ ಮೇಲೆ ಖದೀಮರು ಟ್ರ್ಯಾಕ್ಟರ್ ಹತ್ತಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರೂರು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅಪಾಯದಿಂದ ಪಾರಾಗಿದ್ದಾರೆ.

ಲಾಕ್​ಡೌನ್ ಇದ್ದರೂ ಶಿರೂರು ಗ್ರಾಮದ ಬಳಿ ಅಕ್ರಮವಾಗಿ ಹಳ್ಳದಿಂದ ಮರಳು ತೆಗೆಯುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ದಾಳಿ ನಡೆಸಿದ್ದಾರೆ. ಈ ವೇಳೆ ತಹಶೀಲ್ದಾರ್ ಕಾರಿಗೆ ಟ್ರ್ಯಾಕ್ಟರ್ ಗುದ್ದಿಸಿ ಮರಳು ದಂಧೆಕೋರ ಬಾಳು ಹಾಜಾರೆ ಪರಾರಿಯಾಗಿದ್ದಾನೆ.

ಘಟನೆಯಲ್ಲಿ ತಹಶೀಲ್ದಾರ್ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Published On - 4:27 pm, Wed, 29 April 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us