ನೆಲಮಂಗಲ: ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಯನ್ನು ಅಪಹರಿಸಿ ಕೊಲೆಗೆ ಯತ್ನ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಬಳಿ ನಡೆದಿದ್ದು, ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಡರಾತ್ರಿ ಬೆಂಗಳೂರಿನ 8ನೇ ಮೈಲಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಕುಮಾರ್(35)ನನ್ನು ಕಾರಿನಲ್ಲಿ ಅಪಹರಿಸಿದ್ದ ಮೂವರು ದುಷ್ಕರ್ಮಿಗಳು ಆಂಧ್ರ ಮೂಲದ ಕುಮಾರ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದ ಕುಮಾರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಈ ವೇಳೆ ಎಚ್ಚರಗೊಂಡ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸದ್ಯ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕುಮಾರ್ನನ್ನು ದಾಖಲಿಸಲಾಗಿದೆ.
ಬಿಜೆಪಿ OBC ಘಟಕದ ಅಧ್ಯಕ್ಷನ ಹತ್ಯೆಗೆ ತಡರಾತ್ರಿ ಡಾಬಾದಲ್ಲಿ ಯತ್ನ