ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಕಳ್ಳ ಅರೆಸ್ಟ್

|

Updated on: May 20, 2020 | 12:53 PM

ಬೆಳಗಾವಿ: ಮಡಿವಾಳೇಶ್ವರ ಮಠದ ಪೀಠಾಧಿಪತಿ ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಲ್ಲಿಕಾರ್ಜುನ ಬುಡಶೆಟ್ಟಿಯನ್ನು ಮುರಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಾಕ್​ಡೌನ್ ಸಡಿಲಿಕೆಯಾದ ಹಿನ್ನೆಲೆಯಲ್ಲಿ ತಡರಾತ್ರಿ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದ ಮಠದಲ್ಲಿ ಆರೋಪಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಈ ವೇಳೆ ಕಳ್ಳತನಕ್ಕೆ ವಿರೋಧವೊಡ್ಡಿದ ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ. ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಗೆ ಸ್ವಾಮೀಜಿಯನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ಮಾಡಿದ ಆರೋಪಿ ಮಲ್ಲಿಕಾರ್ಜುನ ಬುಡಶೆಟ್ಟಿ ಮೇಲೆ ಹಲವು […]

ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಕಳ್ಳ ಅರೆಸ್ಟ್
Follow us on

ಬೆಳಗಾವಿ: ಮಡಿವಾಳೇಶ್ವರ ಮಠದ ಪೀಠಾಧಿಪತಿ ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಲ್ಲಿಕಾರ್ಜುನ ಬುಡಶೆಟ್ಟಿಯನ್ನು ಮುರಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಾಕ್​ಡೌನ್ ಸಡಿಲಿಕೆಯಾದ ಹಿನ್ನೆಲೆಯಲ್ಲಿ ತಡರಾತ್ರಿ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದ ಮಠದಲ್ಲಿ ಆರೋಪಿ ಕಳ್ಳತನಕ್ಕೆ ಯತ್ನಿಸಿದ್ದಾನೆ.

ಈ ವೇಳೆ ಕಳ್ಳತನಕ್ಕೆ ವಿರೋಧವೊಡ್ಡಿದ ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ. ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಗೆ ಸ್ವಾಮೀಜಿಯನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಹಲ್ಲೆ ಮಾಡಿದ ಆರೋಪಿ ಮಲ್ಲಿಕಾರ್ಜುನ ಬುಡಶೆಟ್ಟಿ ಮೇಲೆ ಹಲವು ಅಪರಾಧ ಕೇಸ್‌ಗಳಿವೆ. ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಮಲ್ಲಿಕಾರ್ಜುನ ಬುಡಶೆಟ್ಟಿ, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಸವದತ್ತಿ ತಾಲೂಕಿನ ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:44 am, Wed, 20 May 20