ಜನ, ಪೊಲೀಸರ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ಸಾವು.. ಹೇಗೆ?
ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರೂ ಜನ ಸ್ಪಂದಿಸದ ಕಾರಣ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ವಿಡಿಯೋ ಮಾಡ್ತಾ ಅಮಾನವೀಯವಾಗಿ ವರ್ತಿಸಿದರು ಆಟೋ ಪಲ್ಟಿಯಾಗಿ ಚಾಲಕ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಜನ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ಕೋನಾಪುರದಲ್ಲಿ ನಡೆದಿದೆ. ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಬದಲು ವಿಡಿಯೋ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ. ಅಲ್ಲದೆ ಸ್ಥಳಕ್ಕೆ ಬಂದ ಪೊಲೀಸ್ ಕಾನ್ಸ್‌ಟೇಬಲ್ ಕೂಡ ಆ್ಯಂಬುಲೆನ್ಸ್‌ಗಾಗಿ ಕಾದುನಿಂತು ನಿರ್ಲಕ್ಷ್ಯ […]

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರೂ ಜನ ಸ್ಪಂದಿಸದ ಕಾರಣ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ವಿಡಿಯೋ ಮಾಡ್ತಾ ಅಮಾನವೀಯವಾಗಿ ವರ್ತಿಸಿದರು ಆಟೋ ಪಲ್ಟಿಯಾಗಿ ಚಾಲಕ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಜನ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ಕೋನಾಪುರದಲ್ಲಿ ನಡೆದಿದೆ. ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಬದಲು ವಿಡಿಯೋ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ. ಅಲ್ಲದೆ ಸ್ಥಳಕ್ಕೆ ಬಂದ ಪೊಲೀಸ್ ಕಾನ್ಸ್‌ಟೇಬಲ್ ಕೂಡ ಆ್ಯಂಬುಲೆನ್ಸ್‌ಗಾಗಿ ಕಾದುನಿಂತು ನಿರ್ಲಕ್ಷ್ಯ ತೋರಿದ್ದಾರೆ.
ತಡವಾಗಿ ಆಸ್ಪತ್ರೆಗೆ ದಾಖಲಿಸಿದ ಹಿನ್ನೆಲೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಮಾರೇಶ್(31) ಮೃತಪಟ್ಟಿದ್ದಾರೆ. ರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಕೊಡಿಸಿದ್ದರೆ. ಚಾಲಕ ಮಾರೇಶ್ ಬದುಕುಳಿಯುತ್ತಿದ್ದರು. ಆದರೆ ಜನರ, ಪೊಲೀಸರ ನಿರ್ಲಕ್ಷ್ಯಕ್ಕೆ ಪ್ರಾಣ ಪಕ್ಷಿ ಹಾರಿಹೋಗಿದೆ.




