ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಆಟೋ ಪಲ್ಟಿ, ಚಾಲಕ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಲಗಟ್ಟ ಗ್ರಾಮದ ಬಳಿ ಆಟೋ ಪಲ್ಟಿಯಾಗಿ, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮರಿಕುಂಟೆ ಗ್ರಾಮದ ಚಾಲಕ ಶಶಿ (23) ಮೃತ ದುರ್ದೈವಿ. ಅಡ್ಡ ಬಂದ ನಾಯಿ ಆಟೋದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಸ್ತೆಯಲ್ಲಿ ಅಡ್ಡ ಬಂದ ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಆಟೋ ಪಲ್ಟಿಯಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಆಟೋ ಪಲ್ಟಿ, ಚಾಲಕ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​

Updated on: Jul 04, 2020 | 6:35 PM

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಲಗಟ್ಟ ಗ್ರಾಮದ ಬಳಿ ಆಟೋ ಪಲ್ಟಿಯಾಗಿ, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮರಿಕುಂಟೆ ಗ್ರಾಮದ ಚಾಲಕ ಶಶಿ (23) ಮೃತ ದುರ್ದೈವಿ.

ಅಡ್ಡ ಬಂದ ನಾಯಿ
ಆಟೋದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಸ್ತೆಯಲ್ಲಿ ಅಡ್ಡ ಬಂದ ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಆಟೋ ಪಲ್ಟಿಯಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 5:48 pm, Sat, 4 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us