ಮೈಸೂರಿನ ದೇವರಾಜ ಮೊಹಲ್ಲಾದಲ್ಲಿದ್ದ ಪರೀಕ್ಷಾ ಕೇಂದ್ರ ಮಹಾರಾಣಿ ಕಾಲೇಜಿಗೆ ಶಿಫ್ಟ್

ಮೈಸೂರು: ಇಡೀ ರಾಜ್ಯದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಎಸ್​ಎಸ್​ಎಲ್​ಸಿ ಎಕ್ಸಾಂ ನಾಳೆಯಿಂದ ಜುಲೈ 4ರತನಕ ನಡೆಯಲಿದೆ. ಈ ನಡುವೆ ಪೋಷಕರಿಗೆ ದೊಡ್ಡ ತಲೆ ನೋವಾಗಿದ್ದು ತಮ್ಮ ಮಕ್ಕಳಿಗೆ ಪರೀಕ್ಷೆಗೆ ಕಳಿಸುವುದು ಎಷ್ಟು ಸೇಫ್ ಅನ್ನುವುದು. ಕೆಲವೊಂದು SSLC ಪರೀಕ್ಷಾ ಕೇಂದ್ರಗಳು ಕಂಟೈನ್ಮೆಂಟ್ ಜೋನ್​ನಲ್ಲಿವೆ. ಹೀಗಾಗಿ ಪೋಷಕರು ಗೊಂದಲದಲ್ಲಿದ್ದರು.. ಈ ಬಗ್ಗೆ ಕೆಲ ದಿನಗಳ ಹಿಂದೆ ಟಿವಿ9 ವರದಿ ಪ್ರಸಾರ ಮಾಡಿತ್ತು. ಇದೀಗ ಎಚ್ಚೆತ್ತ ಶಿಕ್ಷಣ ಇಲಾಖೆ ಕಂಟೈನ್ಮೆಂಟ್ ಜೋನ್‌ನಲ್ಲಿದ್ದ ಪರೀಕ್ಷಾ ಕೇಂದ್ರವನ್ನು ಸ್ಥಳಾಂತರ ಮಾಡಿದೆ. ಮೈಸೂರಿನ ದೇವರಾಜ […]

ಮೈಸೂರಿನ ದೇವರಾಜ ಮೊಹಲ್ಲಾದಲ್ಲಿದ್ದ ಪರೀಕ್ಷಾ ಕೇಂದ್ರ ಮಹಾರಾಣಿ ಕಾಲೇಜಿಗೆ ಶಿಫ್ಟ್
Follow us
ಆಯೇಷಾ ಬಾನು
|

Updated on: Jun 24, 2020 | 9:52 AM

ಮೈಸೂರು: ಇಡೀ ರಾಜ್ಯದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಎಸ್​ಎಸ್​ಎಲ್​ಸಿ ಎಕ್ಸಾಂ ನಾಳೆಯಿಂದ ಜುಲೈ 4ರತನಕ ನಡೆಯಲಿದೆ. ಈ ನಡುವೆ ಪೋಷಕರಿಗೆ ದೊಡ್ಡ ತಲೆ ನೋವಾಗಿದ್ದು ತಮ್ಮ ಮಕ್ಕಳಿಗೆ ಪರೀಕ್ಷೆಗೆ ಕಳಿಸುವುದು ಎಷ್ಟು ಸೇಫ್ ಅನ್ನುವುದು.

ಕೆಲವೊಂದು SSLC ಪರೀಕ್ಷಾ ಕೇಂದ್ರಗಳು ಕಂಟೈನ್ಮೆಂಟ್ ಜೋನ್​ನಲ್ಲಿವೆ. ಹೀಗಾಗಿ ಪೋಷಕರು ಗೊಂದಲದಲ್ಲಿದ್ದರು.. ಈ ಬಗ್ಗೆ ಕೆಲ ದಿನಗಳ ಹಿಂದೆ ಟಿವಿ9 ವರದಿ ಪ್ರಸಾರ ಮಾಡಿತ್ತು. ಇದೀಗ ಎಚ್ಚೆತ್ತ ಶಿಕ್ಷಣ ಇಲಾಖೆ ಕಂಟೈನ್ಮೆಂಟ್ ಜೋನ್‌ನಲ್ಲಿದ್ದ ಪರೀಕ್ಷಾ ಕೇಂದ್ರವನ್ನು ಸ್ಥಳಾಂತರ ಮಾಡಿದೆ.

ಮೈಸೂರಿನ ದೇವರಾಜ ಮೊಹಲ್ಲಾದ ಲ್ಲಿದ್ದ ಕೃಷ್ಣವಿಲಾಸ ರಸ್ತೆಯಲ್ಲಿರುವ ಅವಿಲಾ ಕಾನ್ವೆಂಟ್‌ ಪರೀಕ್ಷಾ ಕೇಂದ್ರವಾಗಿ ನಿಗದಿಯಾಗಿತ್ತು. ಆದರೆ ಆ ರಸ್ತೆ ಕಂಟೈನ್ಮೆಂಟ್ ಜೋನ್‌ ಆಗಿದ್ದರಿಂದ ಪೋಷಕರು ಆತಂಕ ವ್ಯಕ್ತಪಡಿಸಿದ್ದರು. ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಅಳಲನ್ನು ತೋಡಿಕೊಂಡಿದ್ದರು. ಆದ್ರೆ ಈಗ ದೇವರಾಜ ಮೊಹಲ್ಲಾದಲ್ಲಿದ್ದ ಪರೀಕ್ಷಾ ಕೇಂದ್ರವನ್ನು ಮಹಾರಾಣಿ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ಟೈನ್ಮೆಂಟ್ ಜೋನ್‌ನಲ್ಲಿ ಪರೀಕ್ಷಾ ಕೇಂದ್ರವಿದ್ದ ಹಿನ್ನೆಲೆಯಲ್ಲಿ ಸ್ಥಳಾಂತರಿಸಲಾಗಿದೆ ಎಂದು ಡಿಡಿಪಿಐ ಪಾಂಡುರಂಗ ಸ್ಪಷ್ಟಪಡಿಸಿದ್ದಾರೆ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!