Baburao chinchansur: ಹಿರಿಯ ನಾಯಕ ಬಾಬುರಾವ್ ಚಿಂಚನಸೂರ್ ಗೆ ಮೇಲ್ಮನೆ ಟಿಕೆಟ್ ಘೋಷಿಸಿದ ಬಿಜೆಪಿ

| Updated By: ಸಾಧು ಶ್ರೀನಾಥ್​

Updated on: Jul 30, 2022 | 5:42 PM

ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಸಪ್ತ ಖಾತೆಗಳ ಸಚಿವ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ (ಹಾಲಿ ರಾಜ್ಯ ಸಭಾ ಸದಸ್ಯ) ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಬಾಬುರಾವ್ ಚಿಂಚನಸೂರ್ ಪ್ರಮುಖ ಕಾರಣಕರ್ತರಾಗಿದ್ದರು.

Baburao chinchansur: ಹಿರಿಯ ನಾಯಕ ಬಾಬುರಾವ್ ಚಿಂಚನಸೂರ್ ಗೆ ಮೇಲ್ಮನೆ ಟಿಕೆಟ್ ಘೋಷಿಸಿದ ಬಿಜೆಪಿ
ಬಾಬುರಾವ್ ಚಿಂಚನಸೂರ್
Follow us on

ನವದೆಹಲಿ: ಕಾಂಗ್ರೆಸ್​​ ಪಕ್ಷದ ಮೇಲ್ಮನೆ ಸದಸ್ಯ ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯ ವಿಧಾನ ಪರಿಷತ್ ನ ಒಂದು ಸ್ಥಾನಕ್ಕಾಗಿ ಉಪ ಚುನಾವಣೆ ನಡೆಯಬೇಕಿದೆ. ಮುಂದಿನ ತಿಂಗಳು ಆಗಸ್ಟ್ 11 ರಂದು ಉಪ ಚುನಾವಣೆ (Legislative Council Election) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ತನ್ನ ಅಭ್ಯರ್ಥಿಯ ಹೆಸರನ್ನು (BJP ticket ) ಘೋಷಿಸಿದೆ. ಪರಿಷತ್ ಗೆ ಬಿಜೆಪಿಯಿಂದ ಬಾಬುರಾವ್ ಚಿಂಚನಸೂರ್ ಗೆ ಟಿಕೆಟ್ (Baburao chinchansur) ನೀಡಲಾಗಿದೆ ಎಂದು ಇಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರಕಟಿಸಿದ್ದಾರೆ.

ಬಾಬುರಾವ್ ಚಿಂಚನಸೂರ್ ಹಾಲಿ ನಿಜ ಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿದ್ದಾರೆ. ಚಿಂಚನಸೂರ್, ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಕ್ಷೇತ್ರದಿಂದ ವಿಧಾನಸಭೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ. ಚಿಂಚನಸೂರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಇದೆ ಗುರುಮಠಕಲ್‌ ನಲ್ಲಿ ಸತತ ಎರಡು ಬಾರಿ ಗೆಲವು ಸಾಧಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ಸೇರಿದ್ದರು. ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಸಪ್ತ ಖಾತೆಗಳ ಸಚಿವ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ (ಹಾಲಿ ರಾಜ್ಯ ಸಭಾ ಸದಸ್ಯ) ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಬಾಬುರಾವ್ ಚಿಂಚನಸೂರ್ ಪ್ರಮುಖ ಕಾರಣಕರ್ತರಾಗಿದ್ದರು.