ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರ ಅಮಾನವೀಯ ವರ್ತನೆ, ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು

| Updated By:

Updated on: Jun 09, 2020 | 11:00 AM

ರಾಯಚೂರು: ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರ ಅಮಾನವೀಯ ಕೃತ್ಯದಿಂದ ಗರ್ಭಿಣಿ ಹೊಟ್ಟೆಯಲ್ಲಿದ್ದ ಮಗು ಮೃತಪಟ್ಟಿದೆ. ರಕ್ತಸ್ರಾವದಿಂದ ಕೊರೊನಾ ಸೋಂಕಿತ ಗರ್ಭಿಣಿ ಮಹಿಳೆ ನರಳಾಡುತ್ತಿದ್ದರೂ ವೈದ್ಯರು ಸ್ಪಂದಿಸಲಿಲ್ಲ. ಹಾಗಾಗಿ ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮಗು ಹೊಟ್ಟೆಯಲ್ಲೇ ಸಾವಿಗೀಡಾಗಿದೆ. ದೇವದುರ್ಗ ಮೂಲದ ಗರ್ಭಿಣಿ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿದ್ದರು. ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ಸಕಾಲಕ್ಕೆ ವೈದ್ಯರು ಚಿಕಿತ್ಸೆ ನೀಡದ ಕಾರಣ ಸೋಂಕಿತರೆಲ್ಲರೂ ಊಟ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಮಣಿದು ಗರ್ಭಿಣಿಯನ್ನ ರಿಮ್ಸ್ ಆಸ್ಪತ್ರೆಗೆ ವೈದ್ಯರು ಶಿಫ್ಟ್ […]

ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರ ಅಮಾನವೀಯ ವರ್ತನೆ, ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು
Follow us on

ರಾಯಚೂರು: ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರ ಅಮಾನವೀಯ ಕೃತ್ಯದಿಂದ ಗರ್ಭಿಣಿ ಹೊಟ್ಟೆಯಲ್ಲಿದ್ದ ಮಗು ಮೃತಪಟ್ಟಿದೆ. ರಕ್ತಸ್ರಾವದಿಂದ ಕೊರೊನಾ ಸೋಂಕಿತ ಗರ್ಭಿಣಿ ಮಹಿಳೆ ನರಳಾಡುತ್ತಿದ್ದರೂ ವೈದ್ಯರು ಸ್ಪಂದಿಸಲಿಲ್ಲ. ಹಾಗಾಗಿ ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮಗು ಹೊಟ್ಟೆಯಲ್ಲೇ ಸಾವಿಗೀಡಾಗಿದೆ.

ದೇವದುರ್ಗ ಮೂಲದ ಗರ್ಭಿಣಿ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿದ್ದರು. ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ಸಕಾಲಕ್ಕೆ ವೈದ್ಯರು ಚಿಕಿತ್ಸೆ ನೀಡದ ಕಾರಣ ಸೋಂಕಿತರೆಲ್ಲರೂ ಊಟ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಗೆ ಮಣಿದು ಗರ್ಭಿಣಿಯನ್ನ ರಿಮ್ಸ್ ಆಸ್ಪತ್ರೆಗೆ ವೈದ್ಯರು ಶಿಫ್ಟ್ ಮಾಡಿದ್ದರು. ವೈದ್ಯರ ಬೇಜವಾಬ್ದಾರಿಗೆ ರೊಚ್ಚಿಗೆದ್ದ ಸೋಂಕಿತರು ಆಸ್ಪತ್ರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟ‌ನೆ ನಡೆಸುತ್ತಿದ್ದಾರೆ.

Published On - 10:43 am, Tue, 9 June 20