ಕಾಲೇಜು ಹುಡುಗರ ಕತೆ ‘ಬ್ಯಾಂಕ್ ಬೇಂಚರ್ಸ್’ ಹಾಸ್ಯವೇ ಸಿನಿಮಾದ ಜೀವಾಳ

ಹೊಸಬರ ತಂಡಗಳು ಚಿತ್ರರಂಗಕ್ಕೆ ಬರುತ್ತಲೇ ಇರುತ್ತವೆ. ಕೆಲವು ಸದ್ದು ಮಾಡುತ್ತವೆ, ಕೆಲವು ಸದ್ದಿಲ್ಲದೆ ಹೋಗುತ್ತವೆ. ಇದೀಗ ಹೊಸ ತಂಡವೊಂದು ‘ಬ್ಯಾಕ್ ಬೇಂಚರ್ಸ್’ ಸಿನಿಮಾ ಮೂಲಕ ಎಂಟ್ರಿ ಕೊಡುತ್ತಿದ್ದಾರೆ.

ಕಾಲೇಜು ಹುಡುಗರ ಕತೆ ‘ಬ್ಯಾಂಕ್ ಬೇಂಚರ್ಸ್’ ಹಾಸ್ಯವೇ ಸಿನಿಮಾದ ಜೀವಾಳ
Follow us
ಮಂಜುನಾಥ ಸಿ.
|

Updated on: Jun 01, 2024 | 10:48 PM

ಕಾಲೇಜು ಕತೆಯುಳ್ಳ ಸಿನಿಮಾಗಳು (Cinema) ಸಾಕಷ್ಟು ಕನ್ನಡದಲ್ಲಿ ಬಂದಿವೆ, ಬರುತ್ತಲೇ ಇರುತ್ತವೆ. ಆದರೆ ಸಾಮಾನ್ಯವಾಗಿ ಕಾಲೇಜು ಕತೆಗಳು ಪ್ರೇಮಕತೆಯ ಸುತ್ತಲೇ ಗಿರಕಿ ಹೊಡೆಯುತ್ತವೆ. ಆದರೆ ಹಾಸ್ಯ, ಮನೋರಂಜನೆಯನ್ನು ಗಮನದಲ್ಲಿಟ್ಟುಕೊಂಡು ಕಾಲೇಜು ದಿನಗಳ ಸಿನಿಮಾ ಒಂದು ಕನ್ನಡದಲ್ಲಿ ಬರುತ್ತಿದೆ, ಅದುವೇ ‘ಬ್ಯಾಕ್ ಬೆಂಚರ್ಸ್ ’. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಇದೇ ಸಿನಿಮಾದ ‘ಯಲ್ಲೋ ಯಲ್ಲೋ’ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಯವಜನತೆಗೆ ಮುದ ನೀಡುವ ಈ ಹಾಡನ್ನು ನಕುಲ್ ಅಭಯಂಕರ್ ಹಾಡಿದ್ದಾರೆ. ಸಂಗೀತವನ್ನೂ ನಕುಲ್ ಅಭಯಂಕರ್ ಅವರೆ ನೀಡಿದ್ದಾರೆ.

ಸಿನಿಮಾದ ನಿರ್ದೇಶಕ ಮತ್ತು ನಿರ್ಮಾಪಕ ಎರಡೂ ಆಗಿರುವ ಬಿ.ಆರ್ ರಾಜಶೇಖರ್ ಮಾತನಾಡಿ, ‘ಇದೊಂದು ಮನೋರಂಜನೆಯೇ ಪ್ರಮುಖವಾಗಿರುವ ಕಾಲೇಜು ಸ್ಟೋರಿ, ಸಿನಿಮಾದ ಚಿತ್ರೀಕರಣ ಸಂಪೂರ್ಣ ಮುಗಿದಿದ್ದು ಬಿಡುಗಡೆಗೆ ಸಿದ್ದಾವಾಗಿದೆ‌.‌ ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಜೂನ್ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರು ಹೊಸಬರು. ಹೊಸತಂಡಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದು ಮನವಿ ಮಾಡಿದರು.

ಇದನ್ನೂ ಓದಿ:ಜಾನ್ವಿ ಕಪೂರ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು?

ಸಿನಿಮಾದಲ್ಲಿ ನಟಿಸಿರುವ ರಂಜನ್ ಮಾತನಾಡಿ, ನಮ್ಮಗೆಲ್ಲಾ ಇದು ಮೊದಲ ಸಿನಿಮಾ. ಆದರೆ ನಮಗೆ ನಟನೆ ಹೊಸತಲ್ಲ‌‌. ನಾವೆಲ್ಲ ನಟನೆ ಕಲಿತು ಬಂದಿರುವವರು. ಈಗ ಚಿತ್ರಮಂದಿರಕ್ಕೆ ಹೆಚ್ಚಾಗಿ ಜನರು ಬರುತ್ತಿಲ್ಲ. ಆ ಮಾತನ್ನು ಸುಳ್ಳು ಮಾಡುವ ಪ್ರಯತ್ನವನ್ನು ನಾವು ಮಾಡುತ್ತೇವೆ‌. ವಿನೂತನ ಪ್ರಚಾರ ಮಾಡುವ ಮೂಲಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವ ಪ್ರಯತ್ನ ಮಾಡುತ್ತೇವೆ‌. ಚಿತ್ರಮಂದಿರಕ್ಕೆ ಬಂದ ಮೇಲೆ ನಮ್ಮ ಚಿತ್ರ ನೀವು ಕೊಟ್ಟ ದುಡ್ಡಿಗೆ ಮೋಸ ಆಗುವುದಿಲ್ಲ ಎಂಬ ಭರವಸೆ ನೀಡುತ್ತೇವೆ ಎಂದರು.

‘ಬ್ಯಾಕ್ ಬೆಂಚರ್ಸ್ ’ ಸಿನಿಮಾದಲ್ಲಿ ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಮಾನ್ಯ ಗೌಡ, ಕುಂಕುಮ್ ಹೆಚ್, ಮನೋಜ್ ಶೆಟ್ಟಿ ಇನ್ನೂ ಕೆಲವು ಹೊಸ ಕಲಾವಿದರು ನಟಿಸಿದ್ದಾರೆ. ಮನೋಹರ್ ಜೋಶಿ “ಬ್ಯಾಕ್ ಬೆಂಚರ್ಸ್ ” ಸಿನಿಮಾಕ್ಕೆ ಛಾಯಾಗ್ರಹಣ ಮಾಡಿದ್ದಾರೆ.

ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಬಳಗವಿರುವ ಈ ಚಿತ್ರಕ್ಕೆ ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನವಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ