ಮೋದಿ ಜೊತೆ ಪರೀಕ್ಷಾ ಪೇ ಚರ್ಚಾ: ಬಾಗಲಕೋಟೆ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಆಯ್ಕೆ
ಬಾಗಲಕೋಟೆ: ದೆಹಲಿಯಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೆ ಚರ್ಚಾ ಸಂವಾದಕ್ಕೆ ರಾಜ್ಯದಿಂದ ಬಾಗಲಕೋಟೆ ಜಿಲ್ಲೆಯ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಹುನಗುಂದ ತಾಲೂಕಿನ ಚಿಕ್ಕಬಿದರಕಲ್ಲು ಪ್ರೌಢಶಾಲೆ ವಿದ್ಯಾರ್ಥಿನಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ. SSLC ಓದುತ್ತಿರುವ ಪೂರ್ಣಿಮಾ ರೇವಣಸಿದ್ದಪ್ಪ ನಾಶಿ ತಾರಿವಾಳ ಗ್ರಾಮದ ನಿವಾಸಿ. ಸಂವಾದ ಸಂಬಂಧ ಆನ್ಲೈನ್ನಲ್ಲಿ ಪೂರ್ಣಿಮಾ ಪ್ರಬಂಧ ಬರೆದಿದ್ದರು. ಇದೀಗ ಪ್ರಧಾನಿ ಮೋದಿ ಜೊತೆ ಸಂವಾದದಲ್ಲಿ ಭಾಗವಹಿಸುವ ಅವಕಾಶ ಸರ್ಕಾರಿ ಶಾಲಾ ಬಾಲಕಿಗೆ ಲಭಿಸಿದೆ. ಜನವರಿ 16ರಂದು ವರದಿ ಮಾಡಿಕೊಳ್ಳುವಂತೆ ಕರ್ನಾಟಕ ಸಮಗ್ರ ಶಿಕ್ಷಣ ಕಾರ್ಯಕ್ರಮ […]
ಬಾಗಲಕೋಟೆ: ದೆಹಲಿಯಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೆ ಚರ್ಚಾ ಸಂವಾದಕ್ಕೆ ರಾಜ್ಯದಿಂದ ಬಾಗಲಕೋಟೆ ಜಿಲ್ಲೆಯ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಹುನಗುಂದ ತಾಲೂಕಿನ ಚಿಕ್ಕಬಿದರಕಲ್ಲು ಪ್ರೌಢಶಾಲೆ ವಿದ್ಯಾರ್ಥಿನಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.
SSLC ಓದುತ್ತಿರುವ ಪೂರ್ಣಿಮಾ ರೇವಣಸಿದ್ದಪ್ಪ ನಾಶಿ ತಾರಿವಾಳ ಗ್ರಾಮದ ನಿವಾಸಿ. ಸಂವಾದ ಸಂಬಂಧ ಆನ್ಲೈನ್ನಲ್ಲಿ ಪೂರ್ಣಿಮಾ ಪ್ರಬಂಧ ಬರೆದಿದ್ದರು. ಇದೀಗ ಪ್ರಧಾನಿ ಮೋದಿ ಜೊತೆ ಸಂವಾದದಲ್ಲಿ ಭಾಗವಹಿಸುವ ಅವಕಾಶ ಸರ್ಕಾರಿ ಶಾಲಾ ಬಾಲಕಿಗೆ ಲಭಿಸಿದೆ. ಜನವರಿ 16ರಂದು ವರದಿ ಮಾಡಿಕೊಳ್ಳುವಂತೆ ಕರ್ನಾಟಕ ಸಮಗ್ರ ಶಿಕ್ಷಣ ಕಾರ್ಯಕ್ರಮ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಾಲಕಿ ಬಗ್ಗೆ ಮಾಹಿತಿ ತುಂಬಿ ಇ-ಮೇಲ್ ಮಾಡುವಂತೆ ಶಾಲೆಯ ಮುಖ್ಯಸ್ಥರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ಜೊತೆ ಸಂವಾದದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿನಿ ಬಗ್ಗೆ ಶಾಲೆಯ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
Published On - 11:39 am, Mon, 6 January 20