AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 ಫಲಶ್ರುತಿ: ಅಪಘಾತದಲ್ಲಿ ಮೃತಪಟ್ಟ ವಾರಿಯರ್​ ಕುಟುಂಬಕ್ಕೆ ಸಿಕ್ತು 50 ಲಕ್ಷ ರೂ ಪರಿಹಾರ

ಬಾಗಲಕೋಟೆ: ಕೊವಿಡ್ ಕರ್ತವ್ಯಕ್ಕೆ ತೆರಳುವ ವೇಳೆ ಅಪಘಾತದಲ್ಲಿ ಸಾವನ್ನಪ್ಪಿದ ಅಂಗನವಾಡಿ ಕಾರ್ಯಕರ್ತೆಯ ಕುಟುಂಬಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ 50 ಲಕ್ಷ ರೂಪಾಯಿ ಪರಿಹಾರ ನೀಡಲಾಗಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮ ನಡೆದಿದೆ. ಮೇ 18ರಂದು ಕೊವಿಡ್ ಕರ್ತವ್ಯಕ್ಕೆ ತೆರಳುವ ವೇಳೆ ಅವಘಡದಲ್ಲಿ ಮೃತಪಟ್ಟಿದ್ದ ಪ್ರಭಾವತಿ ಹಂಗರಗಿ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಲಾಗಿದೆ. ಪ್ರಭಾವತಿಯವರ ಹೆಸರಿನಲ್ಲಿದ್ದ 50 ಲಕ್ಷ ರೂಪಾಯಿ ವಿಮೆ ಹಣವನ್ನು ಸಂದಾಯ ಮಾಡಲಾಗಿದೆ. ಪ್ರಭಾವತಿ ನಂದಿಕೇಶ್ವರ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ […]

TV9 ಫಲಶ್ರುತಿ: ಅಪಘಾತದಲ್ಲಿ ಮೃತಪಟ್ಟ ವಾರಿಯರ್​ ಕುಟುಂಬಕ್ಕೆ ಸಿಕ್ತು 50 ಲಕ್ಷ ರೂ ಪರಿಹಾರ
KUSHAL V
| Edited By: |

Updated on:Sep 19, 2020 | 12:17 PM

Share

ಬಾಗಲಕೋಟೆ: ಕೊವಿಡ್ ಕರ್ತವ್ಯಕ್ಕೆ ತೆರಳುವ ವೇಳೆ ಅಪಘಾತದಲ್ಲಿ ಸಾವನ್ನಪ್ಪಿದ ಅಂಗನವಾಡಿ ಕಾರ್ಯಕರ್ತೆಯ ಕುಟುಂಬಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ 50 ಲಕ್ಷ ರೂಪಾಯಿ ಪರಿಹಾರ ನೀಡಲಾಗಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮ ನಡೆದಿದೆ. ಮೇ 18ರಂದು ಕೊವಿಡ್ ಕರ್ತವ್ಯಕ್ಕೆ ತೆರಳುವ ವೇಳೆ ಅವಘಡದಲ್ಲಿ ಮೃತಪಟ್ಟಿದ್ದ ಪ್ರಭಾವತಿ ಹಂಗರಗಿ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಲಾಗಿದೆ. ಪ್ರಭಾವತಿಯವರ ಹೆಸರಿನಲ್ಲಿದ್ದ 50 ಲಕ್ಷ ರೂಪಾಯಿ ವಿಮೆ ಹಣವನ್ನು ಸಂದಾಯ ಮಾಡಲಾಗಿದೆ.

ಪ್ರಭಾವತಿ ನಂದಿಕೇಶ್ವರ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೇ 18 ರಂದು ಕೊವಿಡ್ ಕರ್ತವ್ಯಕ್ಕೆ ತೆರಳುವ ವೇಳೆ ಬೈಕ್‌ನಿಂದ ಬಿದ್ದು ಪ್ರಭಾವತಿ ತಲೆಗೆ ಗಂಭೀರ ಗಾಯವಾಗಿತ್ತು. ನಂತರ, ಚಿಕಿತ್ಸೆ ಫಲಿಸದೆ ಮೇ 20 ರಂದು ಸಾವನ್ನಪ್ಪಿದ್ದರು.

ಕೊರೊನಾಪೀಡಿತರಾಗಿ ಸಾವನ್ನಪ್ಪಿದರೆ ಮಾತ್ರ ವಾರಿಯರ್​ ಕುಟುಂಬಕ್ಕೆ ಪರಿಹಾರ ಕೊಡಲಾಗುವುದು ಎಂದು ಅಧಿಕಾರಿಗಳು ಆಗ ತಿಳಿಸಿದ್ದರಂತೆ. ಹಾಗಾಗಿ, ಟಿವಿ 9 ಈ ಬಗ್ಗೆ ಮೇ 22ರಂದು ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಆಗ, ಆರೋಗ್ಯ ಸಚಿವ ಶ್ರೀರಾಮುಲು  ಕೊರೊನಾ ವಾರಿಯರ್ ಕುಟುಂಬಕ್ಕೆ ಪರಿಹಾರ ಕೊಡಿಸೋದಾಗಿ ಟಿವಿ 9ಗೆ ಭರವಸೆ ನೀಡಿದ್ದರು.

ಸದ್ಯ ಪ್ರಭಾವತಿ ಪತಿ ಕುಮಾರಯ್ಯ ಹಂಗರಗಿ ಅಕೌಂಟ್​ಗೆ 50 ಲಕ್ಷ ರೂಪಾಯಿ ಹಣ ಸಂದಾಯವಾಗಿದೆ. ತಮ್ಮ ಸಂಕಷ್ಟವನ್ನು ಬೆಳಕಿಗೆ ಬರುವಂತೆ ಮಾಡಿದ ಟಿವಿ 9ಗೆ ಕುಮಾರಯ್ಯ , ಮಗಳು ಪ್ರತಿಭಾ ಮತ್ತು ಇತರೆ ಕುಟುಂಬಸ್ಥರು ತಮ್ಮ ಧನ್ಯವಾದ ತಿಳಿಸಿದ್ದಾರೆ.

Published On - 11:59 am, Sat, 19 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ