ಮಾಜಿ ಮೇಯರ್ ಸಂಪತ್ ರಾಜ್ ಜಾಮೀನು ಅರ್ಜಿ ವಜಾ
ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ರ ಜಾಮೀನು ಅರ್ಜಿ ವಜಾಗೊಂಡಿದೆ. ಬೆಂಗಳೂರಿನ ಸಿಸಿಹೆಚ್ 67ರ ಜಡ್ಜ್ ಕೆ.ಕಾತ್ಯಾಯಿನಿ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ರ ಜಾಮೀನು ಅರ್ಜಿ ವಜಾಗೊಂಡಿದೆ. ಬೆಂಗಳೂರಿನ ಸಿಸಿಹೆಚ್ 67ರ ಜಡ್ಜ್ ಕೆ.ಕಾತ್ಯಾಯಿನಿ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಕೆ.ಜೆ.ಹಳ್ಳಿ-ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಮತ್ತು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸಂಪತ್ ರಾಜ್ ಕೆಲವು ದಿನಗಳ ಹಿಂದೆ ಸಿಸಿಬಿ ಬಲೆಗೆ ಬಿದ್ದಿದ್ದರು. ಪ್ರಕರಣದಲ್ಲಿ ಚಾರ್ಜ್ಶೀಟ್ ದಾಖಲಾದ ದಿನದಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್ನ ಬಹಳ ಪ್ರಯಾಸದ ನಂತರ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು.
ಕೆ.ಜಿ ಹಳ್ಳಿ-ಡಿ.ಜೆ ಹಳ್ಳಿ ಹಿಂಸಾಚಾರ: ಮಾಜಿ ಮೇಯರ್ ಸಂಪತ್ ರಾಜ್ CCB ಕಸ್ಟಡಿಗೆ
Published On - 5:38 pm, Tue, 1 December 20