ಮಾಜಿ ಮೇಯರ್ ಸಂಪತ್ ರಾಜ್ ಜಾಮೀನು ಅರ್ಜಿ ವಜಾ

ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್​ರ ಜಾಮೀನು ಅರ್ಜಿ ವಜಾಗೊಂಡಿದೆ. ಬೆಂಗಳೂರಿನ ಸಿಸಿಹೆಚ್ 67ರ ಜಡ್ಜ್ ಕೆ.ಕಾತ್ಯಾಯಿನಿ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಾಜಿ ಮೇಯರ್ ಸಂಪತ್ ರಾಜ್ ಜಾಮೀನು ಅರ್ಜಿ ವಜಾ

Updated on: Dec 01, 2020 | 5:47 PM

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್​ರ ಜಾಮೀನು ಅರ್ಜಿ ವಜಾಗೊಂಡಿದೆ. ಬೆಂಗಳೂರಿನ ಸಿಸಿಹೆಚ್ 67ರ ಜಡ್ಜ್ ಕೆ.ಕಾತ್ಯಾಯಿನಿ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ಕೆ.ಜೆ.ಹಳ್ಳಿ-ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಮತ್ತು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸಂಪತ್​ ರಾಜ್ ಕೆಲವು ದಿನಗಳ ಹಿಂದೆ ಸಿಸಿಬಿ ಬಲೆಗೆ ಬಿದ್ದಿದ್ದರು. ಪ್ರಕರಣದಲ್ಲಿ ಚಾರ್ಜ್​ಶೀಟ್ ದಾಖಲಾದ ದಿನದಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್​ನ ಬಹಳ ಪ್ರಯಾಸದ ನಂತರ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು.

ಕೆ.ಜಿ ಹಳ್ಳಿ-ಡಿ.ಜೆ ಹಳ್ಳಿ ಹಿಂಸಾಚಾರ: ಮಾಜಿ ಮೇಯರ್​ ಸಂಪತ್​ ರಾಜ್ CCB ಕಸ್ಟಡಿಗೆ

Published On - 5:38 pm, Tue, 1 December 20