ಕನ್ನಡಿಗರ ಪಾಲಿಗೆ ಸಂತಸದ ಸುದ್ದಿ..ಬೈಯಪ್ಪನಹಳ್ಳಿ ರೈಲು ನಿಲ್ದಾಣಕ್ಕೆ ‘ಸರ್​ಎಂವಿ’ ಹೆಸರು

ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣಕ್ಕೆ ಸರ್.​​ಎಂ. ವಿಶ್ವೇಶ್ವರಯ್ಯ ಅವರ ಹೆಸರಿಡಲು ಸರ್ಕಾರ ನಿರ್ಧರಿಸಿದೆ.

ಕನ್ನಡಿಗರ ಪಾಲಿಗೆ ಸಂತಸದ ಸುದ್ದಿ..ಬೈಯಪ್ಪನಹಳ್ಳಿ ರೈಲು ನಿಲ್ದಾಣಕ್ಕೆ 'ಸರ್​ಎಂವಿ' ಹೆಸರು
ಬೈಯಪ್ಪನಹಳ್ಳಿ ರೈಲು ನಿಲ್ದಾಣಕ್ಕೆ ಸರ್ ಎಂ ವಿಶ್ವೇಶ್ವರಯ್ಯ ಅವರ ಹೆಸರಿಡಲು ನಿರ್ಧರಿಸಲಾಗಿದೆ
Follow us
guruganesh bhat
| Updated By: Lakshmi Hegde

Updated on:Dec 05, 2020 | 7:19 PM

ಬೆಂಗಳೂರು: ಬೆಂಗಳೂರಿನ ಬೈಯಪ್ಪನಹಳ್ಳಿಯ ರೈಲು ನಿಲ್ದಾಣ ಇನ್ಮುಂದೆ ‘ಸರ್. ಎಂ. ವಿಶ್ವೇಶ್ವರಯ್ಯ ನಿಲ್ದಾಣ, ಬೆಂಗಳೂರು’ ಎಂಬ ಹೆಸರಿನಿಂದ ಗುರುತಿಸಿಕೊಳ್ಳಲಿದೆ.

ಈ ಕುರಿತು ವಿಶೇಷ ಕರ್ನಾಟಕ ರಾಜ್ಯಪತ್ರ ಹೊರಡಿಸಿರುವ ಸರ್ಕಾರ, ಸರ್. ಎಂ. ವಿಶ್ವೇಶ್ವರಯ್ಯ  ಹೆಸರನ್ನು ರೈಲು ನಿಲ್ದಾಣಕ್ಕೆ ಇಡಲು ಸಮ್ಮತಿ ಸೂಚಿಸಿದೆ. ಕನ್ನಡ, ಇಂಗ್ಲಿಷ್​  ಮತ್ತು ದೇವನಾಗರಿ ಲಿಪಿಗಳಲ್ಲಿ ಸರ್​ಎಂವಿ ಹೆಸರಿನ ನಾಮಫಲಕವನ್ನು ಅಳವಡಿಸಲಾಗುವುದು ಎಂದು ರಾಜ್ಯಪತ್ರ ತಿಳಿಸಿದೆ. ಇಂಗ್ಲೀಷಿನಲ್ಲಿ SIR. M. VISWESWARAYA TERMINAL, BENGALURU ಎಂದು ನಾಮಕರಣ ಮಾಡಲಾಗುವುದೆಂದು ಸರ್ಕಾರ ತಿಳಿಸಿದೆ.

ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಎಂದು ನಾಮಕರಣ ಮಾಡಲಾಗಿತ್ತು. ಅಲ್ಲದೇ, ಬೆಂಗಳೂರಿನ ‘ನಮ್ಮ ಮೆಟ್ರೋ’ವಿನ ಹಲವು ನಿಲ್ದಾಣಗಳಿಗೆ ಕನ್ನಡದ ಹೆಮ್ಮೆಯ ನಾಯಕರ ಹೆಸರಿಡಲಾಗಿತ್ತು. ಮೆಜೆಸ್ಟಿಕ್​ನ ನಾಡಪ್ರಭು ಕೆಂಪೇಗೌಡ ಬಸ್ ನಿಲ್ದಾಣ, ವಿಧಾನಸೌಧದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರೋ ನಿಲ್ದಾಣ, ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳು ಪ್ರಯಾಣಿಕರ ಮನಸಲ್ಲಿ ಕರ್ನಾಟಕದ ಕುರಿತು ಹೆಮ್ಮೆ ಮೂಡಿಸುತ್ತಿವೆ.

ಐತಿಹಾಸಿಕ, ಭೌಗೋಳಿಕ ಹಿನ್ನೆಲೆಯೂ ಇದೆ.. ಇತಿಹಾಸ ಮತ್ತು ಭೌಗೋಳಿಕವಾಗಿಯೂ ರೈಲು, ಬಸ್ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಿಗೆ ವಿಶಿಷ್ಟ ಹೆಸರಿಡುವ ಸಂಪ್ರದಾಯ ರೂಡಿಯಲ್ಲಿದೆ. ಉದಾಹರಣೆಗೆ, ಬೆಂಗಳೂರಿನ ಕಂಟೇನ್ಮೆಂಟ್ ವಲಯದ ರೈಲು ನಿಲ್ದಾಣಕ್ಕೆ ದಂಡು ರೈಲು ನಿಲ್ದಾಣ ಎಂಬ ಹೆಸರಿದೆ. ಹಿಂದಿನ ಕಾಲದಲ್ಲಿ ದಂಡು ಬೆಂಗಳೂರು ನಗರದ ಹೊರವಲಯವಾಗಿತ್ತು. ರೈಲು ನಿಲ್ದಾಣವೂ ಇದೇ ಪ್ರದೇಶದಲ್ಲಿತ್ತು. ಸೈನಿಕರು ನಗರದ ಕಾವಲಿಗೋಸ್ಕರ ದಂಡುವಿನ ಬಳಿ ವಸತಿ ಹೂಡುತ್ತಿದ್ದರು. ಹೀಗಾಗಿ, ದಂಡು ರೈಲು ನಿಲ್ದಾಣ ಎಂಬ ಹೆಸರನ್ನೇ ರೈಲು ನಿಲ್ದಾಣಕ್ಕೆ ಇಡಲಾಗಿದೆ. ಇದೀಗ ಸರ್ ಎಂ ವಿಶ್ವೇಶ್ವರಯ್ಯ ಅವರ ಹೆಸರಿಡಲು ಸರ್ಕಾರ ನಿರ್ಧರಿಸುವುದು ಕನ್ನಡಿಗರಲ್ಲಿ ಸಂತಸ ಮೂಡಿಸಿದೆ.

Published On - 6:57 pm, Sat, 5 December 20

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?