ಮುಸ್ಲಿಂ ಕುಟುಂಬಗಳಿಗೆ ಹೊಟ್ಟೆ ಮೇಲೆ ತಣ್ಣೀರ ಬಟ್ಟೆ; ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮರ ವ್ಯಾಪಾರಕ್ಕಿಲ್ಲ ಜಾಗ, ಭಜರಂಗ ದಳದಿಂದ ಕ್ಯಾಂಪೇನ್

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿರುವ ಐತಿಹಾಸಿಕ ಮತ್ತು ಪ್ರಸಿದ್ಧ ದೇವಸ್ಥಾನ ತುಳು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆ ಗದ್ದೆಯಲ್ಲಿ ತಾತ್ಕಾಲಿಕ ಸಂತೆ ಏಲಂ ಪ್ರಕಟಣೆಗೊಳಿಸಲಾಗಿದ್ದು ಹಿಂದೂ ಬಂದವರಿಗೆ ಮಾತ್ರ ಏಲಂ ನಲ್ಲಿ ಭಾಗವಹಿಸಲು ಅವಕಾಶ ಅಂತಾ ನಮೂದು ಮಾಡಲಾಗಿದೆ.

ಮುಸ್ಲಿಂ ಕುಟುಂಬಗಳಿಗೆ ಹೊಟ್ಟೆ ಮೇಲೆ ತಣ್ಣೀರ ಬಟ್ಟೆ; ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮರ ವ್ಯಾಪಾರಕ್ಕಿಲ್ಲ ಜಾಗ, ಭಜರಂಗ ದಳದಿಂದ ಕ್ಯಾಂಪೇನ್
ಜಾತ್ರೆ ಚಿತ್ರ (ಸಾಂಕೇತಿಕ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on:Mar 22, 2022 | 8:29 PM

ಶಿವಮೊಗ್ಗ: ಹಿಜಾಬ್(Hijab) ಸಂಬಂಧ ಹೈಕೋರ್ಟ್(High Court) ತೀರ್ಪು ಹೊರ ಬೀಳುತ್ತಿದ್ದಂತೆ ಕೆಲ ಮುಸ್ಲಿಮರು ತೀರ್ಪನ್ನು ವಿರೋಧಿಸಿದ್ದರು. ಭಟ್ಕಳದಲ್ಲಿ ಮುಸ್ಲಿಂ ವರ್ತಕರು ಅಂಗಡಿಗಳನ್ನು ಮುಚ್ಚಿ ವಿರೋಧ ವ್ಯಕ್ತಪಡಿಸಿದ್ದರು. ಹೈಕೋರ್ಟ್ ಆದೇಶ ವಿರೋಧಿಸಿ ಧರಣಿಗೆ ಕರೆ ನೀಡಿದ್ದರು. ಹೀಗಾಗಿ ಕಾಪು ಮಾರಿ ಪೂಜೆಯಲ್ಲಿ(Kapu mari puja) ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಮಾರಿಗುಡಿ ಹರಾಜಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಿಲ್ಲ. ಹಿಂದೂ ದೇಗುಲಗಳಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ವಿವಿಧ ದೇಗುಲಗಳ ಮುಂದೆ ಬೇಡಿಕೆ ಇಡಲಾಗಿದೆ. ಮಂಗಳೂರಿನ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿದೆ.

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ನಿರ್ಬಂಧ ಹಿನ್ನೆಲೆ ಶಿವಮೊಗ್ಗ ನಗರದ ಪ್ರಸಿದ್ಧ ಮಾರಿಕಾಂಬ ಜಾತ್ರೆಯಲ್ಲೂ ನಿರ್ಬಂಧ ಹೇರಲಾಗಿದೆ. ಬಜರಂಗದಳ ಕಾರ್ಯಕರ್ತರ ಹರ್ಷ ಕೊಲೆ ಪರಿಣಾಮ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಮಾರಿಕಾಂಬ ಜಾತ್ರೆಯನ್ನು ಇಂದಿನಿಂದ ಆರಂಭಿಸಲಾಗಿದೆ. ಜಾತ್ರೆಯಲ್ಲಿ ಕೇವಲ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಈ ಬಗ್ಗೆ ಬಜರಂಗದಳ ಮುಖಂಡ ದೀನ್ ದಯಾಳ್ ಮಾಹಿತಿ ನೀಡಿದ್ದಾರೆ.

ಏಲಂನಲ್ಲಿ ಹಿಂದೂಗಳಿಗಷ್ಟೆ ಅವಕಾಶ ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿರುವ ಐತಿಹಾಸಿಕ ಮತ್ತು ಪ್ರಸಿದ್ಧ ದೇವಸ್ಥಾನ ತುಳು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆ ಗದ್ದೆಯಲ್ಲಿ ತಾತ್ಕಾಲಿಕ ಸಂತೆ ಏಲಂ ಪ್ರಕಟಣೆಗೊಳಿಸಲಾಗಿದ್ದು ಹಿಂದೂ ಬಂದವರಿಗೆ ಮಾತ್ರ ಏಲಂ ನಲ್ಲಿ ಭಾಗವಹಿಸಲು ಅವಕಾಶ ಅಂತಾ ನಮೂದು ಮಾಡಲಾಗಿದೆ.

ಜಾತ್ರೆಗಳಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಭಜರಂಗದಳದಿಂದ ಫೋಸ್ಟ್ ಹಿಜಾಬ್ ವಿಚಾರಕ್ಕೆ ಮಾರ್ಚ್ 17ಕ್ಕೆ ಮುಸ್ಲಿಂ ಮುಖಂಡರು ಕರ್ನಾಟಕ ಬಂದ್ ಕರೆ ಕೊಟ್ಟಿದ್ದ ಹಿನ್ನೆಲೆ ದೇವಸ್ಥಾನ, ಜಾತ್ರೆ ದಿನಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿ ಮುಂಗಟ್ಟಿಗೆ ಅವಕಾಶ ಕೊಡಬಾರದು ಎಂದು ಭಜರಂಗದಳದಿಂದ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಭಜರಂಗದಳ, ಪ್ರಸಿದ್ಧ ದೇವರುಗಳ ಜಾತ್ರೆ, ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ಅಂಗಡಿ ವ್ಯಾಪಾರಕ್ಕೆ ಮುಸ್ಲಿಮರಿಗೆ ಅವಕಾಶ ಕಲ್ಪಿಸದಂತೆ ಪೋಸ್ಟ್ ಮೂಲಕ ಮನವಿ ಮಾಡಿದ್ದಾರೆ. ಅಯಾ ಆಡಳಿತ ಮಂಡಳಿಯ ಮುಖ್ಯಸ್ಥರನ್ನ ಭೇಟಿಯಾಗಿ ಮೌಖಿಕ ಹೇಳಿಕೆ ನೀಡಿದ್ದಾರೆ. ಭಜರಂಗದಳದ ಮುಖಂಡರು ಹಾಗೂ ಕಾರ್ಯಕರ್ತರಿಂದ ಹೊಸ ಬಗೆಯ ಕ್ಯಾಂಪೇನ್ ಶುರುವಾಗಿದೆ. ಭಜರಂಗದಳದ ನಡೆಗೆ ಅನೇಕ ಕಡೆ ವಿರೋಧ ವ್ಯಕ್ತವಾಗಿದೆ.

ಇನ್ನು ಮತ್ತೊಂದೆಡೆ ಟಿವಿ9 ಜೊತೆ ಶಿವಮೊಗ್ಗ ಪೀಸ್ ಆರ್ಗನೈಸೇಶನ್ ಜಿಲ್ಲಾ ಅಧ್ಯಕ್ಷರಾದ ರಿಯಾಜ್ ಅಹ್ಮದ್ ಮಾತನಾಡಿದ್ದು ಶಿವಮೊಗ್ಗದ ಮಾರಿಕಾಂಬ ಜಾತ್ರೆಯಲ್ಲಿ ಅಂಗಡಿ ಹಾಕುವ ವಿವಾದ ಮುಸ್ಲಿಂ ವ್ಯಾಪಾರಸ್ಥರಿಗೆ ಅಂಗಡಿಗೆ ಅವಕಾಶವಿಲ್ಲ ಎಂಬುವ ವ್ಯವಸ್ಥೆ ಸರಿಯಿಲ್ಲ. ಎಲ್ಲರೂ ಸಾಮರಸ್ಯದಿಂದ ಇರಬೇಕು. ಕೆಲ ಕೋಮುವಾದಿಗಳಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ಯಾರೇಜ್, ಪಂಕರ್ ಶಾಪ್ ಇತ್ಯಾದಿ ಕೆಲಸ ಮಾಡುವವರಿಗೆ ತಾರತಮ್ಯ ಮಾಡಲು ಬರುವುದಿಲ್ಲ. ಇಲ್ಲಿ ಯಾರೂ ಹಿಂದೂ ಮುಸ್ಲಿಂ ಅಂತಾ ನೋಡುವುದಿಲ್ಲ. ಒಬ್ಬರಿಗೊಬ್ಬರು ಸೌಹಾರ್ದತೆಯಿಂದ ಇರಬೇಕು. ಇಲ್ಲದಿದ್ದರೆ ಬರುವ ದಿನಗಳು ಇನ್ನೂ ಕೆಟ್ಟ ಪರಿಸ್ಥಿತಿ ಎದುರಾಗುತ್ತದೆ. ಪ್ರಜ್ಞಾವಂತ ಎಲ್ಲ ನಾಗರಿಕರು ಈ ಕುರಿತು ಗಮನ ಹರಿಸಬೇಕು. ಇದೆಲ್ಲ ಬೀದಿ ಮತ್ತು ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ ದೊಡ್ಡ ಪೆಟ್ಟು ಬೀಳಲಿದೆ ಎಂದರು.

ವ್ಯಾಪಾರಕ್ಕೆ ನಿರ್ಬಂಧ ಹೇರಿ ದೇವಸ್ಥಾನಗಳ ಮುಂಭಾಗ ಬ್ಯಾನರ್ ಅಳವಡಿಕೆ ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆ ನಾಳೆಯಿಂದ ಮೂರು ದಿನ ಅದ್ಧೂರಿಯಾಗಿ ನಡೆಯಲಿದೆ. ಇದಕ್ಕೆ 80 ಮುಸ್ಲಿಂ ವ್ಯಾಪಾರಿಗಳು ವ್ಯಾಪಾರಕ್ಕೆ ಅರ್ಜಿ ಸಲ್ಲಿಸಿದ್ದರು.  80 ಮುಸ್ಲಿಂ ವ್ಯಾಪಾರಿಗಳ ಪೈಕಿ 40 ಮುಸ್ಲಿಂ ವ್ಯಾಪಾರಿಗಳು ಗೈರಾಗಿದ್ದಾರೆ. ಸದ್ಯ ಬಪ್ಪನಾಡಿನಲ್ಲಿ ವ್ಯಾಪಾರಕ್ಕೆ ನಿರ್ಬಂಧಿಸಿ ಬ್ಯಾನರ್ ಅಳವಡಿಸಲಾಗಿದೆ. ಹಿಂದೂಯೇತರರಿಗೆ ಜಾತ್ರೋತ್ಸವದಲ್ಲಿ ವ್ಯಾಪಾರಕ್ಕೆ ನಿರ್ಬಂಧ ಹೇರಿ ದೇವಸ್ಥಾನಗಳ ಮುಂಭಾಗ ಬ್ಯಾನರ್ ಅಳವಡಿಸಲಾಗಿದೆ.

ಶಿವಮೊಗ್ಗದ ಜಾಮೀಯಾ ಮಸೀದಿ ಮಾಜಿ ಅಧ್ಯಕ್ಷ ಆಫ್ತಾಬ್ ಫರ್ವೇಜ್ ಟಿವಿ9 ಜೊತೆ ಮಾತನಾಡಿದ್ದು ಶಿವಮೊಗ್ಗದ ಮಾರಿಕಾಂಬ ಜಾತ್ರೆ ಇಂದಿನಿಂದ ಆರಂಭವಾಗುತ್ತೆ. ಜಾತ್ರೆಯಲ್ಲಿ ಮುಸ್ಲಿಮರಿಗೆ ಅಂಗಡಿಗೆ ಅವಕಾಶ ನಿರಾಕರಣೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಕೋಮು ಸೌಹಾರ್ದತೆ ಹಾಳು ಮಾಡುತ್ತಿದ್ದಾರೆ. ಯುವ ಪೀಳಿಗೆಗೆ ಇದೊಂದು ಕೆಟ್ಫ ಸಂದೇಶ ರವಾನೆ. ಸಮಾಜದಲ್ಲಿ ವಿಷ ಬೀಜ ಬಿತ್ತಲಾಗುತ್ತಿದೆ. ಡಿಸಿ ಅವರು ದೇವಸ್ಥಾನದ ಸಮಿತಿ ಜೊತೆ ಮಾತುಕತೆ ಮಾಡುವುದಾಗಿ ಹೇಳಿದ್ದರು. ಈ ಘಟನೆಯನ್ನು ಮುಸ್ಲಿಂ ಸಮಾಜ ಖಂಡಿಸುತ್ತದೆ. ಹರ್ಷ ಕೊಲೆ ಪ್ರಕರಣದಲ್ಲಿ ಯಾರೋ ಮಾಡಿದ ತಪ್ಪಿಗೆ ಈಗ ಇಡೀ ಸಮಾಜವನ್ನು ದ್ವೇಷ ಮಾಡುವುದು ಎಷ್ಟು ಸರಿ. ಕೂಡಲೇ ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಬೇಕು ಎಂದು ಹೇಳಿದ್ರು.

ಇದನ್ನೂ ಓದಿ: ಇದು ಹೋಳಿ ಸಮಯ! ಸಮವಸ್ತ್ರ ಧರಿಸಿಯೇ ರಂಗಿನ ಹಬ್ಬ ಆಚರಿಸಿ, ಸೆಲ್ಪಿ ಕ್ರೇಜ್​ನಲ್ಲಿ ಮಿಂದೆದ್ದ ಮಹಿಳಾ ಪೊಲೀಸ್

ಶಿವಮೊಗ್ಗ ಪೊಲೀಸರ ಹೈ ಅಲರ್ಟ್ ನಡುವೆಯೂ ಕೊಲೆ ಯತ್ನ; 13 ದಿನ ಸಾವು ಬದುಕಿನ ಹೋರಾಟ ನಡೆಸಿದ್ದ ವ್ಯಕ್ತಿ ಸಾವು, ಅಸಲಿಗೆ ಆಗಿದ್ದೇನು?

Published On - 5:50 pm, Tue, 22 March 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ