AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಕರಿ ಅಂಗಡಿ ಮಾಲೀಕನಿಗೆ ತಗ್ಲಾಕ್ಕೊಂಡ ಕೊರೊನಾ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಹಾವೇರಿ: ಯಾರು, ಯಾವುದೇ ಊರಿಗೆ ಅಥವಾ ಸಂಬಂಧಿಕರ ಮನೆಗಳಿಗೆ ಹೋಗಬೇಕಾದರೆ ಬ್ರೇಡ್, ಖಾರ ಹೀಗೆ ಬೇಕರಿ ಅಂಗಡಿಯಲ್ಲಿನ ತಿನಿಸುಗಳನ್ನು ಒಯ್ಯುವುದು ಸಾಮಾನ್ಯ. ಆದರೆ ಈಗ ಬೇಕರಿ ವಸ್ತುಗಳನ್ನು ಒಯ್ದವರಿಗೆ ಒಳಗೊಳಗೆ ಹೆಮ್ಮಾರಿ ಕೊರೊನಾ ಭಯ ಶುರುವಾಗಿದೆ. ಯಾಕೆಂದರೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹತ್ತಿಮತ್ತೂರು ಗ್ರಾಮದಲ್ಲಿ ಬೇಕರಿ ಅಂಗಡಿಯವನಿಗೆ ಈಗ ಕೊರೊನಾ ಪಾಸಿಟಿವ್ ಆಗಿದೆ. ಇದರಿಂದ ಬೇಕರಿ ಐಟಂ ಖರೀದಿಸಿದ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಭಯ ಶುರುವಾಗಿದೆ. ಗ್ರಾಮದಲ್ಲಿ ಬೇಕರಿ ಅಂಗಡಿ ಇಟ್ಟುಕೊಂಡಿದ್ದ 44 […]

ಬೇಕರಿ ಅಂಗಡಿ ಮಾಲೀಕನಿಗೆ ತಗ್ಲಾಕ್ಕೊಂಡ ಕೊರೊನಾ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 31, 2020 | 12:12 PM

Share

ಹಾವೇರಿ: ಯಾರು, ಯಾವುದೇ ಊರಿಗೆ ಅಥವಾ ಸಂಬಂಧಿಕರ ಮನೆಗಳಿಗೆ ಹೋಗಬೇಕಾದರೆ ಬ್ರೇಡ್, ಖಾರ ಹೀಗೆ ಬೇಕರಿ ಅಂಗಡಿಯಲ್ಲಿನ ತಿನಿಸುಗಳನ್ನು ಒಯ್ಯುವುದು ಸಾಮಾನ್ಯ. ಆದರೆ ಈಗ ಬೇಕರಿ ವಸ್ತುಗಳನ್ನು ಒಯ್ದವರಿಗೆ ಒಳಗೊಳಗೆ ಹೆಮ್ಮಾರಿ ಕೊರೊನಾ ಭಯ ಶುರುವಾಗಿದೆ. ಯಾಕೆಂದರೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹತ್ತಿಮತ್ತೂರು ಗ್ರಾಮದಲ್ಲಿ ಬೇಕರಿ ಅಂಗಡಿಯವನಿಗೆ ಈಗ ಕೊರೊನಾ ಪಾಸಿಟಿವ್ ಆಗಿದೆ. ಇದರಿಂದ ಬೇಕರಿ ಐಟಂ ಖರೀದಿಸಿದ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಭಯ ಶುರುವಾಗಿದೆ.

ಗ್ರಾಮದಲ್ಲಿ ಬೇಕರಿ ಅಂಗಡಿ ಇಟ್ಟುಕೊಂಡಿದ್ದ 44 ವರ್ಷದ ವ್ಯಕ್ತಿಗೆ ಕಳೆದ ಕೆಲವು ದಿನಗಳ ಹಿಂದೆ ಜ್ವರ, ಕಫ ಮತ್ತು ನೆಗಡಿ ಕಾಣಿಸಿಕೊಂಡಿತ್ತು. ಹೀಗಾಗಿ ಪಕ್ಕದ ಹೊಸರಿತ್ತಿ ಗ್ರಾಮದ ಖಾಸಗಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಂಡಿದ್ದ. ಆದರೆ ಆರೋಗ್ಯ ಸುಧಾರಿಸದ ಕಾರಣಕ್ಕೆ ಜುಲೈ 15ರಂದು ಹಾವೇರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದ. ಅಷ್ಟಾದರೂ ಆತನ ಆರೋಗ್ಯ ಸುಧಾರಿಸಲಿಲ್ಲ.

ಹೀಗಾಗಿ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡು ಊರಿಗೆ ವಾಪಸ್ ಆಗಿದ್ದ. ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಹೋಗಿದ್ದಾಗ ಅಲ್ಲಿ ಆತನ ಗಂಟಲು ದ್ರವದ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಿದ್ದರು. ಆದರೆ ಲ್ಯಾಬ್ ವರದಿಯಲ್ಲಿ ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ.  ಆಗ, ಸೋಂಕಿತನನ್ನು ಸವಣೂರಿನ ಕೋವಿಡ್19 ಆಸ್ಪತ್ರೆಗೆ ದಾಖಲಿಸಲಾಯಿತು.

ಬೇಕರಿ ಅಂಗಡಿ ನಡೆಸುತ್ತಿದ್ದವನಿಗೆ ಸೋಂಕು ದೃಢಪಡುತ್ತಿದ್ದಂತೆ ಬೇಕರಿ ಮತ್ತು ಆತ ವಾಸವಾಗಿದ್ದ ಮನೆಯ ಪ್ರದೇಶವನ್ನು ಮುಳ್ಳುಕಂಟೆಗಳನ್ನು ಹಾಕಿ ಸೀಲ್ ಡೌನ್ ಮಾಡಲಾಗಿದೆ. ಆದರೆ ಬೇಕರಿ ಅಂಗಡಿಯವನಿಗೆ ದೃಢಪಟ್ಟಿರೋ ಸೋಂಕು ಈಗ ಹತ್ತಿಮತ್ತೂರು ಮಾತ್ರವಲ್ಲ ಸುತ್ತಮುತ್ತಲಿನ ಗ್ರಾಮಗಳ ಜನರಲ್ಲೂ ಭಯ ಶುರುವಾಗುವಂತೆ ಮಾಡಿದೆ.

ಅಷ್ಟೆ ಅಲ್ಲ ಬೇಕರಿ ಅಂಗಡಿಗೆ ಹಾವೇರಿ ನಗರದ ಬೇಕರಿ ಅಂಗಡಿಗಳಿಂದಲೇ ಕೆಲವೊಂದು ಬೇಕರಿ ಐಟಂ ಗಳನ್ನ ಸೋಂಕಿತ ಖರೀದಿ ಮಾಡಿಕೊಂಡು ಹೋಗುತ್ತಿದ್ದ ಎಂಬುದು ಸಹ ಹಾವೇರಿ ನಗರದ ಜನರಲ್ಲೂ ಆತಂಕ ಮೂಡಿಸಿದೆ.

ಆತನ ಜೊತೆಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದ ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೆ ಬೇಕರಿ ಅಂಗಡಿಯವನ ಜೊತೆ ಸಂಪರ್ಕ ಹೊಂದಿರುವವರನ್ನು ಪತ್ತೆ ಮಾಡುವ ಕಾರ್ಯದಲ್ಲಿ ನಿರತವಾಗಿದೆ. ಮತ್ತೊಂದೆಡೆ ಬೇಕರಿ ಅಂಗಡಿಯವನಲ್ಲಿ ದೃಢಪಟ್ಟ ಸೋಂಕು ಈಗ ಬೇಕರಿ ಐಟಂ ಖರೀದಿಸಿದವರ ಎದೆಯಲ್ಲಿ ಢವ ಢವ ಶುರು ಮಾಡಿದೆ. -ಪ್ರಭುಗೌಡ ಎನ್.ಪಾಟೀಲ 

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್