ಇಂದಿನಿಂದ ಎರಡು ದಿನ ವಿಶ್ವಪ್ರಸಿದ್ಧ ಹಂಪಿ ಉತ್ಸವ

ಇಂದಿನಿಂದ ಎರಡು ದಿನ ವಿಶ್ವಪ್ರಸಿದ್ಧ ಹಂಪಿ ಉತ್ಸವ

ಬಳ್ಳಾರಿ:ಅಂತೂ ಇಂತೂ ಹಂಪಿ ಉತ್ಸವಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಇಂದು ಮತ್ತು ನಾಳೆ ಹಂಪಿ ಉತ್ಸವ ನಡೆಯಲಿದ್ದು, ಉತ್ಸವಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಬಳ್ಳಾರಿ ಜಿಲ್ಲಾಡಳಿತ ಮಾಡಿಕೊಂಡಿದೆ. ಇನ್ನು ಉತ್ಸವದ ಅಂಗವಾಗಿ ಜರುಗಿದ ವಿಜಯನಗರ ವಸಂತ ವೈಭವ ಮೆರವಣಿಗೆ ಕಣ್ಮನ ಸೆಳೆಯಿತು. ಹೊಸಪೇಟೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಕಲಾತಂಡಗಳ ಮೆರವಣಿಗೆಗೆ ಚಾಲನೆ ನೀಡಿದ್ರು. ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಶಾಸಕ ಆನಂದ್ ಸಿಂಗ್ ಸಾಥ್ ನೀಡಿದ್ರು. ವಸಂತ ವೈಭವದಲ್ಲಿ ಸುಮಾರು 110 […]

sadhu srinath

| Edited By: Ayesha Banu

Nov 23, 2020 | 12:35 PM

ಬಳ್ಳಾರಿ:ಅಂತೂ ಇಂತೂ ಹಂಪಿ ಉತ್ಸವಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಇಂದು ಮತ್ತು ನಾಳೆ ಹಂಪಿ ಉತ್ಸವ ನಡೆಯಲಿದ್ದು, ಉತ್ಸವಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಬಳ್ಳಾರಿ ಜಿಲ್ಲಾಡಳಿತ ಮಾಡಿಕೊಂಡಿದೆ. ಇನ್ನು ಉತ್ಸವದ ಅಂಗವಾಗಿ ಜರುಗಿದ ವಿಜಯನಗರ ವಸಂತ ವೈಭವ ಮೆರವಣಿಗೆ ಕಣ್ಮನ ಸೆಳೆಯಿತು.

ಹೊಸಪೇಟೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಕಲಾತಂಡಗಳ ಮೆರವಣಿಗೆಗೆ ಚಾಲನೆ ನೀಡಿದ್ರು. ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಶಾಸಕ ಆನಂದ್ ಸಿಂಗ್ ಸಾಥ್ ನೀಡಿದ್ರು. ವಸಂತ ವೈಭವದಲ್ಲಿ ಸುಮಾರು 110 ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ಮೆರವಣಿಗೆಯುದ್ದಕ್ಕೂ ತಮ್ಮ ಕಲೆಯನ್ನ ಪ್ರದರ್ಶಿಸಿದರು. ಇನ್ನು ಇಂದಿನಿಂದ ನಡೆಯುವ ಹಂಪಿ ಉತ್ಸವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಹಂಪಿ ಉತ್ಸವದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.

Follow us on

Related Stories

Most Read Stories

Click on your DTH Provider to Add TV9 Kannada