ಬೆಂಗಳೂರಿನಲ್ಲಿ ಜೋರಾದ ಪ್ರತಿಭಟನೆ ಕಾವು; ಟ್ರಾಫಿಕ್​ ಕಿರಿಕಿರಿಯಿಂದ ಹೈರಾಣಾದ ಜನಸಾಮಾನ್ಯರು

Traffic Jam: ಸದ್ಯ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಫ್ರೀಡಂ ಪಾರ್ಕ್ ಪಕ್ಕದ ಕಾಳಿದಾಸ ರಸ್ತೆಯಲ್ಲಿ ಜಮಾಯಿಸುತ್ತಿದ್ದು ಆ ಭಾಗದಲ್ಲಿ ವಾಹನ ದಟ್ಟಣೆ ಉಂಟಾಗಿದೆ.

ಬೆಂಗಳೂರಿನಲ್ಲಿ ಜೋರಾದ ಪ್ರತಿಭಟನೆ ಕಾವು; ಟ್ರಾಫಿಕ್​ ಕಿರಿಕಿರಿಯಿಂದ ಹೈರಾಣಾದ ಜನಸಾಮಾನ್ಯರು
ಸಂಗ್ರಹ ಚಿತ್ರ
Follow us
Skanda
|

Updated on:Mar 02, 2021 | 1:44 PM

ಬೆಂಗಳೂರು: ಮೇಲಿಂದ ಮೇಲೆ ಪ್ರತಿಭಟನೆಯನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಇಂದು ಮೂರು ಪ್ರತ್ಯೇಕ ಪ್ರತಿಭಟನೆಗಳ ಬಿಸಿ ತಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಡೆಸುತ್ತಿರುವ ಪ್ರತಿಭಟನೆ, ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ಪಕ್ಷದ ಪ್ರತಿಭಟನೆ ಮತ್ತು ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದು ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಬೆಂಗಳೂರಿನ ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿ ಟ್ರಾಫಿಕ್ ಜಾಮ್​ನಿಂದ ಜನಸಾಮಾನ್ಯರು ಕಿರಿಕಿರಿ ಅನುಭವಿಸುವಂತಾಗಿದೆ.

ಸದ್ಯ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಫ್ರೀಡಂ ಪಾರ್ಕ್ ಪಕ್ಕದ ಕಾಳಿದಾಸ ರಸ್ತೆಯಲ್ಲಿ ಜಮಾಯಿಸುತ್ತಿದ್ದು ಆ ಭಾಗದಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಇದಕ್ಕೂ ಮುನ್ನ ಶೇಷಾದ್ರಿ ರಸ್ತೆಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿ ನೂರಾರು ಕಾರು ಬೈಕ್ ಗಳು ನಿಂತಲ್ಲೇ ನಿಲ್ಲಬೇಕಾಗಿ ಬಂತು. ಇದಕ್ಕಾಗಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಫ್ಲೈ ಓವರ್ ಮೇಲಿನ ಸಂಚಾರವನ್ನು ರೇಸ್ ಕೋರ್ಸ್ ರೋಡ್ ಕಡೆಗೆ ಡೈವರ್ಟ್ ಮಾಡಿದ ಪೋಲಿಸರು ಸಂಚಾರ ನಿಯಂತ್ರಿಸಲು ಹರಸಾಹಸಪಟ್ಟರು.

ಇನ್ನೊಂದೆಡೆ, ಗ್ಯಾಸ್ ಮತ್ತು ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸುತ್ತಿರುವ ಕಾಂಗ್ರೆಸ್ ಮಹಿಳಾ ಘಟಕದವರು ನೆಲದ ಮೇಲೆ ಊಟ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ನೆಲದ ಮೇಲೆ ಇಡ್ಲಿ, ಸಾಂಬಾರ್ ಬೆರೆಸಿ ಊಟ ಮಾಡಿದ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಇದನ್ನೂ ಓದಿ:

ಇಂದು ಬೆಂಗಳೂರಿಗೆ ತಟ್ಟಲಿದೆ ಪ್ರತಿಭಟನೆ ಬಿಸಿ.. ಸಾರಿಗೆ ನೌಕರರು, ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್‌

ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!

Published On - 1:13 pm, Tue, 2 March 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ