ಬಂಗಾರಪೇಟೆಯಲ್ಲಿ ತಹಶೀಲ್ದಾರ್ಗೆ ಚಾಕು ಇರಿದ ನಿವೃತ್ತ ಶಿಕ್ಷಕ, ತಹಶೀಲ್ದಾರ್ ಸಾವು
ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್ ಅವರಿಗೆ ಚಾಕುವಿನಿಂದ ಇರಿದಿದ್ದಾರೆ. ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ. ತಹಶೀಲ್ದಾರ್ ಸಾವು ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕ ವೆಂಕಟಪತಿಯನ್ನು ಹತ್ಯೆ ಆರೋಪದ ಮೇಲೆ […]
ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್ ಅವರಿಗೆ ಚಾಕುವಿನಿಂದ ಇರಿದಿದ್ದಾರೆ.
ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.
ತಹಶೀಲ್ದಾರ್ ಸಾವು ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕ ವೆಂಕಟಪತಿಯನ್ನು ಹತ್ಯೆ ಆರೋಪದ ಮೇಲೆ ಪೊಲೀಸರು ತಕ್ಷಣ ಬಂಧಿಸಿದ್ದಾರೆ.
25 ಲಕ್ಷ ರೂ. ಪರಿಹಾರ, ಒಬ್ಬರಿಗೆ ನೌಕರಿ -ಯಡಿಯೂರಪ್ಪ ಮುಖ್ಯಮಂತ್ರಿ ಯಡಿಯೂರಪ್ಪ ಬಂಗಾರಪೇಟೆ ತಹಶೀಲ್ದಾರ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಸಿಎಂ ಕಚೇರಿಯಿಂದ ಬಿಡುಗಡೆಯಾದ ಮಾಧ್ಯಮ ಪ್ರಕಟಣೆಯಲ್ಲಿ ಮೃತನ ಕುಟುಂಬಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಪೊಲೀಸ್ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಸಹ ಸೂಚಿಸಿದ್ದಾರೆ. ಜೊತೆಗೆ, ಮೃತ ತಹಶೀಲ್ದಾರ್ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕುಟುಂಬದ ಸದಸ್ಯರೊಬ್ಬರಿಗೆ ನೌಕರಿ ನೀಡಲು ಸೂಚನೆ ನೀಡಿದ್ದಾರೆ.
Published On - 5:50 pm, Thu, 9 July 20