ಬಂಗಾರಪೇಟೆಯಲ್ಲಿ ತಹಶೀಲ್ದಾರ್​ಗೆ ಚಾಕು ಇರಿದ ನಿವೃತ್ತ ಶಿಕ್ಷಕ, ತಹಶೀಲ್ದಾರ್​ ಸಾವು

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ. ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ. ತಹಶೀಲ್ದಾರ್​ ಸಾವು ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕ ವೆಂಕಟಪತಿಯನ್ನು ಹತ್ಯೆ ಆರೋಪದ ಮೇಲೆ […]

ಬಂಗಾರಪೇಟೆಯಲ್ಲಿ ತಹಶೀಲ್ದಾರ್​ಗೆ ಚಾಕು ಇರಿದ ನಿವೃತ್ತ ಶಿಕ್ಷಕ, ತಹಶೀಲ್ದಾರ್​ ಸಾವು
ಸಾಧು ಶ್ರೀನಾಥ್​ Edited By:

Updated on: Jul 09, 2020 | 7:30 PM

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ.

ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.

ತಹಶೀಲ್ದಾರ್​ ಸಾವು
ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕ ವೆಂಕಟಪತಿಯನ್ನು ಹತ್ಯೆ ಆರೋಪದ ಮೇಲೆ ಪೊಲೀಸರು ತಕ್ಷಣ ಬಂಧಿಸಿದ್ದಾರೆ.

 25 ಲಕ್ಷ ರೂ. ಪರಿಹಾರ, ಒಬ್ಬರಿಗೆ ನೌಕರಿ -ಯಡಿಯೂರಪ್ಪ
ಮುಖ್ಯಮಂತ್ರಿ ಯಡಿಯೂರಪ್ಪ ಬಂಗಾರಪೇಟೆ ತಹಶೀಲ್ದಾರ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಸಿಎಂ ಕಚೇರಿಯಿಂದ ಬಿಡುಗಡೆಯಾದ ಮಾಧ್ಯಮ ಪ್ರಕಟಣೆಯಲ್ಲಿ ಮೃತನ ಕುಟುಂಬಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಪೊಲೀಸ್​ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಸಹ ಸೂಚಿಸಿದ್ದಾರೆ. ಜೊತೆಗೆ, ಮೃತ ತಹಶೀಲ್ದಾರ್ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕುಟುಂಬದ ಸದಸ್ಯರೊಬ್ಬರಿಗೆ ನೌಕರಿ ನೀಡಲು ಸೂಚನೆ ನೀಡಿದ್ದಾರೆ.

Published On - 5:50 pm, Thu, 9 July 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us