ಅಮಿತ್​ ಶಾ ಭೇಟಿಯಿಂದ.. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು -ಯತ್ನಾಳ್ ಹೊಸ ಬಾಂಬ್

ಜ.16ರಂದು ಅಮಿತ್​ ಶಾ ವಿಜಯಪುರ ಜಿಲ್ಲೆಗೆ ಬರ್ತಿದ್ದಾರೆ. ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆ ಆಗುತ್ತೋ ಬದಲಾವಣೆ ಆಗುತ್ತೋ ಗೊತ್ತಿಲ್ಲ. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು. ಉತ್ತರ ಕರ್ನಾಟಕ, ವಿಜಯಪುರ ಜಿಲ್ಲೆಗೆ ಒಳಿತಾಗಲಿದೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಅಮಿತ್​ ಶಾ ಭೇಟಿಯಿಂದ.. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು -ಯತ್ನಾಳ್ ಹೊಸ ಬಾಂಬ್
ಬಸನಗೌಡ ಪಾಟೀಲ್​ ಯತ್ನಾಳ್
Follow us
ಆಯೇಷಾ ಬಾನು
| Updated By: KUSHAL V

Updated on:Dec 25, 2020 | 3:31 PM

ವಿಜಯಪುರ: ಜನವರಿ 16ರಂದು ಅಮಿತ್​ ಶಾ ವಿಜಯಪುರ ಜಿಲ್ಲೆಗೆ ಬರ್ತಿದ್ದಾರೆ. ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆಯಾಗುತ್ತೋ ಗೊತ್ತಿಲ್ಲ. ಆದ್ರೆ ಮತ್ತೇನಾದರೂ ಆಗಬಹುದು ಎಂದು ಬಸನಗೌಡ ಪಾಟೀಲ್​ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ‌ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಯತ್ನಾಳ್ ಜ.16ರಂದು ಅಮಿತ್​ ಶಾ ವಿಜಯಪುರ ಜಿಲ್ಲೆಗೆ ಬರ್ತಿದ್ದಾರೆ. ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆ ಆಗುತ್ತೋ ಬದಲಾವಣೆ ಆಗುತ್ತೋ ಗೊತ್ತಿಲ್ಲ. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು. ಉತ್ತರ ಕರ್ನಾಟಕ, ವಿಜಯಪುರ ಜಿಲ್ಲೆಗೆ ಒಳಿತಾಗಲಿದೆ ಎಂದು ಹೇಳಿದ್ದಾರೆ.

ಇದೆಲ್ಲಾ ಮಾಧ್ಯಮದವರ ಸೃಷ್ಟಿ. ಮಾಧ್ಯಮದವರು ಯಾವಾಗ ಯಾವಾಗ ಯಾರ ಪರವಾಗಿ ಇರ್ತರೋ ಗೊತ್ತಿಲ್ಲ. ದಯವಿಟ್ಟು ನನ್ನ ಹೆಸರು ಸಚಿವ ಸಂಪುಟಕ್ಕೆ ಸೇರಲಿದೆ‌ ಎಂದು ಸುದ್ದಿ ಮಾಡಬೇಡಿ. ನನಗೆ ಸಚಿವನಾಗಲು ಇಷ್ಟವಿಲ್ಲ. ಯಾರ ಹಣೆ ಬರಹದಲ್ಲಿ ಏನಿದೆ‌ ಎಂಬುದು ಗೊತ್ತಿಲ್ಲ ಎಂದು ಮಾರ್ಮಿಕವಾಗಿ‌ ಯತ್ನಾಳ್ ನುಡಿದ್ರು. ಸಂಕ್ರಮಣದ ಉತ್ತರಾಯಣದಿಂದ ಕೇಂದ್ರದ ಹೈಕಮಾಂಡ್ ಒಳ್ಳೆಯ‌ ನಿರ್ಣಯ‌ ತೆಗೆದುಕೊಳ್ಳಲಿದ್ದಾರೆ. ವಿಜಯಪುರ ಜಿಲ್ಲೆಗೆ ಇಷ್ಟು ದಿನ ಆದ ಅನ್ಯಾಯ ಸರಿ ಪಡಿಸಲಿದ್ದಾರೆ. ಅಮಿತ್ ಶಾ ಅವರು‌‌‌‌ ಜನವರಿ 16 ರಂದು ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದಾರೆ. ಜಿಲ್ಲೆಯಲ್ಲಿ ನೂತನವಾಗಿ ಸ್ಥಾಪನೆಯಾಗಲಿರುವ IRB ಬಟಾಲಿಯನ್ ಉದ್ಘಾಟನೆಗೆ ಬರಲಿದ್ದಾರೆ. ಅವರು ಬರುವ ಮುನ್ನವೇ ಭಾರಿ ಬದಲಾವಣೆ ಆಗಲಿದೆ ಎಂದು ತಿಳಿಸಿದ್ರು.

ಬ್ಯಾನರ್​ನಲ್ಲಿ‌ ಸಿಎಂ ಭಾವಚಿತ್ರ ಕಾಣೆ ಇನ್ನು ಕಾರ್ಯಕ್ರಮದ ಬ್ಯಾನರ್​ನಲ್ಲಿ‌ ಸಿಎಂ ಭಾವಚಿತ್ರ ಹಾಕದೆ ಇದ್ದುದರ ಬಗೆಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ. ಕೇಂದ್ರ ನಾಯಕರ ಭಾವಚಿತ್ರಗಳನ್ನು ಬ್ಯಾನರ್​ನಲ್ಲಿ ಹಾಕಲಾಗಿದೆ. ಸಿಎಂ ಯಡಿಯೂರಪ್ಪನವರು ನಮ್ಮ ಹೃದಯದಲ್ಲಿ, ಮನದಲ್ಲಿದ್ದಾರೆ ಎಂದು ಸಮಜಾಯಿಷಿ ನೀಡಿದ್ದಾರೆ.

ಯತ್ನಾಳ್ ಒಬ್ಬ ಆರ್ಡಿನರಿ ಶಾಸಕ.. ಇಂಥ ವಿಷಯಗಳನ್ನು ಮಾತಾಡಲು ಅವರು​​ ಯಾರು? -ಡಿ.ವಿ.ಸದಾನಂದಗೌಡ

Published On - 2:30 pm, Fri, 25 December 20

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ