AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಸಲಾತಿ ಹೆಚ್ಚಳ; ಅಧಿಕೃತ ಪ್ರತಿ ಪರಿಶೀಲಿಸಿ ನಿರ್ಧಾರ ಎಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಲಿಂಗಾಯತರಿಗೆ 2ಡಿ ಅಡಿ ಮೀಸಲಾತಿ ಹೆಚ್ಚಳ ಮಾಡಿರುವ ಸಚಿವ ಸಂಪುಟ ನಿರ್ಧಾರದ ಬಗ್ಗೆ ಪರಿಶೀಲನೆ ನಡೆಸಿ ಶನಿವಾರ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಶುಕ್ರವಾರ ರಾತ್ರಿ ತಿಳಿಸಿದರು.

ಮೀಸಲಾತಿ ಹೆಚ್ಚಳ; ಅಧಿಕೃತ ಪ್ರತಿ ಪರಿಶೀಲಿಸಿ ನಿರ್ಧಾರ ಎಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ
ಬಸವ ಜಯಮೃತ್ಯುಂಜಯ ಸ್ವಾಮೀಜಿ
ಗಣಪತಿ ಶರ್ಮಾ
|

Updated on: Mar 24, 2023 | 9:15 PM

Share

ಬೆಂಗಳೂರು: ಲಿಂಗಾಯತರಿಗೆ 2ಡಿ ಅಡಿ ಮೀಸಲಾತಿ (Reservation) ಹೆಚ್ಚಳ ಮಾಡಿರುವ ಸಚಿವ ಸಂಪುಟ ನಿರ್ಧಾರದ ಬಗ್ಗೆ ಪರಿಶೀಲನೆ ನಡೆಸಿ ಶನಿವಾರ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಬಸವ ಜಯಮೃತ್ಯುಂಜಯ (Basava Jaya Mruthyunjaya Swamiji) ಸ್ವಾಮೀಜಿ ಶುಕ್ರವಾರ ರಾತ್ರಿ ತಿಳಿಸಿದರು. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್​ನಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ಅನೇಕ ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಸಂಪುಟ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಮೀಸಲಾತಿ ಶೇ 7ರಷ್ಟು ಹೆಚ್ಚಿಸಿರುವ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ನಮ್ಮ ನಾಯಕರ ಜೊತೆ ಚರ್ಚಿಸಿ ನಾಳೆ ನಿರ್ಧಾರ ಪ್ರಕಟಿಸುತ್ತೇವೆ. ಇದಕ್ಕಾಗಿ ಶನಿವಾರ ಪಂಚಮಸಾಲಿ ಸಮುದಾಯದ ತುರ್ತು ಸಭೆ ಕರೆಯಲಾಗುವುದು ಎಂದು ತಿಳಿಸಿದ್ದಾರೆ.

ಹೋರಾಟ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರಿಕಾಗೋಷ್ಠಿಯಲ್ಲಿ ಹೇಳಿರುವುದರಲ್ಲಿ ಸ್ಪಷ್ಟತೆ ಕಾಣಿಸಲಿಲ್ಲ. ಮೀಸಲಾತಿ ಹೆಚ್ಚಳದ ಬಗ್ಗೆ ನಮಗೆ ಅಧಿಕೃತವಾದ ಪ್ರತಿ ಸಿಕ್ಕಿಲ್ಲ. ಎಲ್ಲಾ ಸೌಲಭ್ಯಗಳನ್ನು 2ಡಿ ಅಡಿ ಕೊಡುತ್ತೇವೆ ಎಂದು ಹೇಳಿದ್ದಾರೆ. ನಮ್ಮ ನಿರ್ದಿಷ್ಟವಾದ ಗುರಿ ಬಗ್ಗೆ ನಾವು ನಾಳೆ ಚರ್ಚೆ ಮಾಡುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ಓದಿ: Cabinet Decision: ಮುಸ್ಲಿಮರ 2ಬಿ ಮೀಸಲಾತಿ ರದ್ದು, ಒಕ್ಕಲಿಗ, ಲಿಂಗಾಯತರಿಗೆ ಹೆಚ್ಚಳ; ಸಿಎಂ ಬೊಮ್ಮಾಯಿ ಘೋಷಣೆ

ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲು ಶುಕ್ರವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More