Kannada News » Latest news » Basavakalyan congress mla b narayan rao died due to coronavirus
ಕೊರೊನಾಗೆ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ಬಲಿ
ಬೆಂಗಳೂರು: ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಬೀದರ್ನ ಬಸವಕಲ್ಯಾಣ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್(65) ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 3.55ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಿ. ನಾರಾಯಣರಾವ್ ಇದೇ ಮೊದಲ ಬಾರಿಗೆ ಶಾಸಕರಾಗಿದ್ದರು. ಆಗಸ್ಟ್30ರಂದು ನಾರಾಯಣರಾವ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಸೆಪ್ಟೆಂಬರ್ 1ರಂದು ಆಸ್ಪತ್ರೆಗೆ ದಾಖಲಾದ್ರು. ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು ಬಿ.ನಾರಾಯಣರಾವ್. ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 3.55ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ವಾರದಲ್ಲಿ ಕೊರೊನಾಗೆ ಇಬ್ಬರು ಶಾಸಕರು ಮತ್ತು ಸಚಿವರು ಬಲಿಯಾಗಿದ್ದಾರೆ.
ಬೆಂಗಳೂರು: ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಬೀದರ್ನ ಬಸವಕಲ್ಯಾಣ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್(65) ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 3.55ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬಿ. ನಾರಾಯಣರಾವ್ ಇದೇ ಮೊದಲ ಬಾರಿಗೆ ಶಾಸಕರಾಗಿದ್ದರು. ಆಗಸ್ಟ್30ರಂದು ನಾರಾಯಣರಾವ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಸೆಪ್ಟೆಂಬರ್ 1ರಂದು ಆಸ್ಪತ್ರೆಗೆ ದಾಖಲಾದ್ರು. ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು ಬಿ.ನಾರಾಯಣರಾವ್. ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 3.55ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ವಾರದಲ್ಲಿ ಕೊರೊನಾಗೆ ಇಬ್ಬರು ಶಾಸಕರು ಮತ್ತು ಸಚಿವರು ಬಲಿಯಾಗಿದ್ದಾರೆ.