AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂದೀಪ್​ ಪಾಟೀಲ್​ ನೇತೃತ್ವದ ಒಂದೇ ತಂಡದಿಂದ ಗಲಭೆಯ ತನಿಖೆ -ಸಚಿವ ಬೊಮ್ಮಾಯಿ

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಕಾವಲ್​ ಭೈರಸಂದ್ರದಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನ ಒಂದೇ ತನಿಖಾ ತಂಡ ವಹಿಸಿಕೊಳ್ಳಲಿದೆ ಎಂಬ ಮಾಹಿತಿಯನ್ನ ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ಒಂದೇ ತಂಡದಿಂದ ತನಿಖೆ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ. ಇದರ ಹೊರತು ಬೇರೆ ಯಾವ ತನಿಖಾ ತಂಡವೂ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಶಾಸಕ ಅಖಂಡ ಚಿತ್ತ ಸಿಬಿಐ ತನಿಖೆಯತ್ತ ಈ ಮಧ್ಯೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಈ […]

ಸಂದೀಪ್​ ಪಾಟೀಲ್​ ನೇತೃತ್ವದ ಒಂದೇ ತಂಡದಿಂದ ಗಲಭೆಯ ತನಿಖೆ -ಸಚಿವ ಬೊಮ್ಮಾಯಿ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 17, 2020 | 3:01 PM

Share

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಕಾವಲ್​ ಭೈರಸಂದ್ರದಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನ ಒಂದೇ ತನಿಖಾ ತಂಡ ವಹಿಸಿಕೊಳ್ಳಲಿದೆ ಎಂಬ ಮಾಹಿತಿಯನ್ನ ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ಒಂದೇ ತಂಡದಿಂದ ತನಿಖೆ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ. ಇದರ ಹೊರತು ಬೇರೆ ಯಾವ ತನಿಖಾ ತಂಡವೂ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಶಾಸಕ ಅಖಂಡ ಚಿತ್ತ ಸಿಬಿಐ ತನಿಖೆಯತ್ತ ಈ ಮಧ್ಯೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಈ ಪ್ರಕರಣದ ತನಿಖೆಯನ್ನ ಸಿಬಿಐಗೆ ಕೊಡಿ ಎಂದು ಮತ್ತೊಮ್ಮೆ ಮನವಿ ಮಾಡಿದ್ದಾರೆ.

ನನ್ನ ಕ್ಷೇತ್ರಕ್ಕೆ ಯಾವುದೇ ಕೆಟ್ಟ ಹೆಸರು ಬರುವುದು ಬೇಡ. ಕಿಡಿಗೇಡಿಗಳ ಕೃತ್ಯಕ್ಕೆ ಬೇರೆಯವರು ಅನುಭವಿಸುವುದು ಬೇಡ. ಯಾರೇ ಪ್ರಭಾವಿ ವ್ಯಕ್ತಿಗಳಿದ್ರೂ ಸರಿ ಅವರು ತಪ್ಪಿತಸ್ಥರಾಗಿದ್ರೆ ಶಿಕ್ಷೆ ಆಗಲಿ. ನಿರಪರಾಧಿಗಳಿಗೆ ಶಿಕ್ಷೆ ಆಗದಂತೆ ಸಿಎಂ ಬಳಿ ಮನವಿ ಮಾಡುವೆ ಎಂದು ಹೇಳಿದ್ದಾರೆ. ಮುಸ್ಲಿಂ ಮುಖಂಡರ ಜೊತೆ ಭೇಟಿ ಮಾಡಿದ ನಂತರ ಮಾತನಾಡಿದ ಶಾಸಕ ಈ ಪ್ರದೇಶದ ನಾಯಕರು ಬರ್ತಿದ್ದಾರೆ. ನಾವೆಲ್ಲಾ ನಿಮ್ಮೊಂದಿಗೆ ಇದ್ದೀವ ಎಂದಿದ್ದಾರೆ. ಆದರೆ, ನಿರಪರಾಧಿಗಳನ್ನು ಪೊಲೀಸರು ಹಿಡಿದುಕೊಂಡು ಹೋಗ್ತಿದ್ದಾರೆ ಎಂದು ದೂರುತ್ತಿದ್ದಾರೆ ಎಂದು ಹೇಳಿದರು.

ಪೋಲೀಸರ ಬಳಿ ನಾನು ಮಾತಾಡ್ತಿದ್ದೇನೆ. ಅವರು ವಿಡಿಯೋ ನೋಡಿ ನಿರಪರಾಧಿಗಳನ್ನು ಬಿಡ್ತಿದ್ದಾರೆ. ಜೊತೆಗೆ, ಹಾಲು ತರಕಾರಿ ಮಾರಾಟಗಾರರಿಗೆ ಅನುಕೂಲ ಮಾಡಿಕೊಡಿ ಎಂದು ಕೇಳಿದ್ದೀನಿ. ನಾವೆಲ್ಲರೂ ಅಣ್ಣತಮ್ಮಂದಿರ ರೀತಿಯೇ ಇದ್ದೀವಿ. ಹಾಗಾಗಿ, ಪೋಲೀಸರು ನೋಡಿಕೊಂಡು ಅಪರಾಧಿಗಳಿಗೆ ಮಾತ್ರ ಶಿಕ್ಷೆ ಕೊಡುವಂತೆ ನಾನೂ ಮನವಿ ಮಾಡಿದ್ದೇನೆ ಎಂದು ಹೇಳಿದರು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ