ಅವರ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ: ಬಸವರಾಜ ಬೊಮ್ಮಾಯಿ ಪತ್ನಿ ಸಂತಸ; ಕರ್ನಾಟಕದ ವಿವಿಧೆಡೆ ಸಂಭ್ರಮಾಚರಣೆ

Basavaraja Bommai: ನೂತನ ಸಿಎಂ ಆಗಿ ಬೊಮ್ಮಾಯಿ ಘೋಷಣೆ ಹಿನ್ನೆಲೆಯಲ್ಲಿ ಬೆಂಬಲಿಗರ, ಬಿಜೆಪಿ ಕಾರ್ಯಕರ್ತರ ಹಾಗೂ ಅಭಿಮಾನಿಗಳ ಸಂಭ್ರಮಾಚರಣೆ ಕರ್ನಾಟಕದ ವಿವಿಧೆಡೆ ಕಂಡುಬಂದಿದೆ.

ಅವರ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ: ಬಸವರಾಜ ಬೊಮ್ಮಾಯಿ ಪತ್ನಿ ಸಂತಸ; ಕರ್ನಾಟಕದ ವಿವಿಧೆಡೆ ಸಂಭ್ರಮಾಚರಣೆ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9kannada Web Team

| Edited By: ganapathi bhat

Jul 27, 2021 | 11:30 PM

ಬೆಂಗಳೂರು: ದೇವರ ಆಶೀರ್ವಾದದಿಂದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾರೆ. ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ಒಳ್ಳೆ ಕೆಲಸ ಮಾಡುವ ಭರವಸೆ ಇದೆ. ಜನರಿಗೆ ಒಳ್ಳೆಯದಾಗಲಿ, ಬೊಮ್ಮಾಯಿ ಒಳ್ಳೆಯ ಕೆಲಸ ಮಾಡಲಿ ಎಂದು ಬಸವರಾಜ ಬೊಮ್ಮಾಯಿ ಪತ್ನಿ ಪ್ರತಿಕ್ರಿಯೆ ನೀಡಿದ್ದಾರೆ. ಕುಟುಂಬದಲ್ಲಿ ಸಂಭ್ರಮ ಹೆಚ್ಚಿದೆ. ನಮ್ಮ ಮಾವನ, ಅವರ ತಂದೆಯ ಕೆಲಸವೇ ಸ್ಫೂರ್ತಿಯಾಗಿದೆ ಎಂದು ಅವರು ಹೇಳಿದ್ದಾರೆ.

ಬೊಮ್ಮಾಯಿ ಕುಟುಂಬದಲ್ಲಿ ಮತ್ತೊಬ್ಬರು ಮುಖ್ಯಮಂತ್ರಿ ಆಗಿರೋದಕ್ಕೆ ಸಹೋದರಿ ಉಮಾ ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ 4 ದಶಕಗಳಿಂದ ಬೊಮ್ಮಾಯಿ ಕುಟುಂಬದ ಆಪ್ತಮಿತ್ರ ಚೆನ್ನು ಪಾಟೀಲ್ ಬೊಮ್ಮಾಯಿಗೆ ಶುಭ ಹಾರೈಸುತ್ತಾ ಭಾವುಕರಾಗಿದ್ದಾರೆ.

ನೂತನ ಸಿಎಂ ಆಗಿ ಬೊಮ್ಮಾಯಿ ಘೋಷಣೆ ಹಿನ್ನೆಲೆಯಲ್ಲಿ ಬೆಂಬಲಿಗರ, ಬಿಜೆಪಿ ಕಾರ್ಯಕರ್ತರ ಹಾಗೂ ಅಭಿಮಾನಿಗಳ ಸಂಭ್ರಮಾಚರಣೆ ಕರ್ನಾಟಕದ ವಿವಿಧೆಡೆ ಕಂಡುಬಂದಿದೆ. ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಭಾವಚಿತ್ರ ಹಿಡಿದು ನೂತನ ಮುಖ್ಯಮಂತ್ರಿಗೆ ಜೈಕಾರ ಹಾಕಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ನಿವಾಸದಲ್ಲಿ ಬಸವರಾಜ ಬೊಮ್ಮಾಯಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಸಂಭ್ರಮ ಕಂಡುಬಂದಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಹೆಸರು ಘೋಷಣೆ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ವಿಜಯೋತ್ಸವ ಮಾಡಲಾಗಿದೆ. ಚಿಂಚೋಳಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಘೋಷಣೆ ಮಾಡುತ್ತಿರುವಂತೆ ಹುಬ್ಬಳ್ಳಿಯ ಆದರ್ಶ್ ಬಡಾವಣೆಯಲ್ಲಿರುವ ಬೊಮ್ಮಾಯಿ ಮನೆ ಬಳಿ ಹರ್ಷೋದ್ಘಾರ ಕಂಡುಬಂದಿದೆ. ಅಭಿಮಾನಿಗಳಿಂದ ಸಿಹಿ ಹಂಚಿ ಘೋಷಣೆ ಕೂಗಿ ಖುಷಿ ಆಚರಣೆ ಮಾಡಲಾಗಿದೆ. ಕೊಪ್ಪಳ ತಾಲೂಕಿನ ಭಾಗ್ಯನಗರದ ಬಿಜೆಪಿ ಕಾರ್ಯಕರ್ತರಿಂದ ಸಿಹಿ ಹಂಚಿ ಸಂಭ್ರಮಾಚರಣೆ ಕಂಡುಬಂದಿದೆ.

ಹಾಸನದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ. ಯಡಿಯೂರಪ್ಪ ಪರ ಘೋಷಣೆ ಕೂಗಿದ್ದಾರೆ. ಜೇವರ್ಗಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ ಮಾಡಲಾಗಿದೆ. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಗಿದೆ.

ಇದನ್ನೂ ಓದಿ: ಚಿತ್ರನೋಟ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದುಕಿನ ಮಹತ್ವದ ಕ್ಷಣಗಳು

Basavaraj Bommai: ಬಸವರಾಜ ಬೊಮ್ಮಾಯಿ ಆಯ್ಕೆಗೆ ಅರವಿಂದ ಬೆಲ್ಲದ್, ಯತ್ನಾಳ್ ಹರ್ಷ

(Basavaraj Bommai Karnataka CM celebration in many places Wife reaction)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada