‘ಪುತ್ರನ ಮದುವೆ ನೆಪದಲ್ಲಿ ಕೋಟಿ ಕೋಟಿ ಖರ್ಚು ಮಾಡ್ತಿದ್ದಾರೆ ಆನಂದ್ ಸಿಂಗ್’

|

Updated on: Nov 28, 2019 | 10:44 AM

ಬಳ್ಳಾರಿ: ಡಿ. 5ರಂದು ವಿಜಯನಗರ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಆದ್ರೆ ಅದಕ್ಕೂ ಮುನ್ನ ಡಿ. 1ರಂದು ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಸಿಂಗ್ ಮದುವೆ ಇದೆ. ಪುತ್ರನ ಮದುವೆ ನೆಪದಲ್ಲಿ ಕೋಟಿ ಕೋಟಿ ಹಣ ಖರ್ಚು ಮಾಡುವ ಮೂಲಕ ಆನಂದ್ ಸಿಂಗ್ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಗಂಭೀರವಾಗಿ ಆರೋಪಿಸಿದ್ದಾರೆ. ಸುಮಾರು 51 ಸಾವಿರ ಕುಟುಂಬಗಳಿಗೆ ತಲಾ 8 ಗ್ರಾಂ ಚಿನ್ನ ನೀಡಲು ಆನಂದ್ ಸಿಂಗ್ ಮುಂದಾಗಿದ್ದಾರೆ. […]

‘ಪುತ್ರನ ಮದುವೆ ನೆಪದಲ್ಲಿ ಕೋಟಿ ಕೋಟಿ ಖರ್ಚು ಮಾಡ್ತಿದ್ದಾರೆ ಆನಂದ್ ಸಿಂಗ್
Follow us on

ಬಳ್ಳಾರಿ: ಡಿ. 5ರಂದು ವಿಜಯನಗರ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಆದ್ರೆ ಅದಕ್ಕೂ ಮುನ್ನ ಡಿ. 1ರಂದು ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಸಿಂಗ್ ಮದುವೆ ಇದೆ. ಪುತ್ರನ ಮದುವೆ ನೆಪದಲ್ಲಿ ಕೋಟಿ ಕೋಟಿ ಹಣ ಖರ್ಚು ಮಾಡುವ ಮೂಲಕ ಆನಂದ್ ಸಿಂಗ್ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಗಂಭೀರವಾಗಿ ಆರೋಪಿಸಿದ್ದಾರೆ.

ಸುಮಾರು 51 ಸಾವಿರ ಕುಟುಂಬಗಳಿಗೆ ತಲಾ 8 ಗ್ರಾಂ ಚಿನ್ನ ನೀಡಲು ಆನಂದ್ ಸಿಂಗ್ ಮುಂದಾಗಿದ್ದಾರೆ. ಪುತ್ರನ ಮದುವೆಗೆ ಕೋಟಿಗಟ್ಟಲೆ ಖರ್ಚು ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷದಿಂದ ದೂರು ನೀಡಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ರೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಆನಂದ್ ಸಿಂಗ್ ಮೇಲೆ ಹೆಚ್ಚು ನಿಗಾ ಇಡಬೇಕು. ಅವರ ಮನೆ ಮುಂದೆ ಸಿಸಿ ಕ್ಯಾಮರಾ ಅಳವಡಿಸಬೇಕೆಂದು ಬಸವರಾಜ ರಾಯರೆಡ್ಡಿ ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದಾರೆ.

ಡಿ.1ರಂದು ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ ಸಿಂಗ್ ಅವರು ಸಂಜನಾ ಸಿಂಗ್ ಅವರನ್ನು ವರಿಸಲಿದ್ದಾರೆ.

Published On - 12:26 pm, Wed, 27 November 19