ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಈ ಬಾರಿ ಕಂಪ್ಲೀಟ್ ಬ್ರೇಕ್..
ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ ನಿರ್ಧರಿಸಿದೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಹೆಚ್ಚು ಜನ ಸೇರ್ತಾರೆ ಈ ವೇಳೆ ದೈಹಿಕ ಅಂತರ, ಮಾಸ್ಕ್ ಎಲ್ಲ ನಿಯಮ ಪಾಲನೆ ಅಸಾಧ್ಯ. ಈ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ. ಈ ಬಗ್ಗೆ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿದ್ದು ಸರ್ಕಾರಕ್ಕೂ ಮನವಿ ಮಾಡಲು ಪಾಲಿಕೆ […]
ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ ನಿರ್ಧರಿಸಿದೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಹೆಚ್ಚು ಜನ ಸೇರ್ತಾರೆ ಈ ವೇಳೆ ದೈಹಿಕ ಅಂತರ, ಮಾಸ್ಕ್ ಎಲ್ಲ ನಿಯಮ ಪಾಲನೆ ಅಸಾಧ್ಯ. ಈ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ.
ಈ ಬಗ್ಗೆ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿದ್ದು ಸರ್ಕಾರಕ್ಕೂ ಮನವಿ ಮಾಡಲು ಪಾಲಿಕೆ ತೀರ್ಮಾನಿಸಿದೆ. ಕೋವಿಡ್ ಮತ್ತೆ ಹೆಚ್ಚಾಗೋ ಸಾಧ್ಯತೆಯಿಂದಾಗಿ 2021ರ ಹೊಸ ವರ್ಷದ ಸಲೆಬ್ರೇಷನ್ಗೆ ನಿರ್ಬಂಧವಿರುತ್ತೆ. ಇನ್ನು ಎರಡನೇ ಹಂತದ ಕೊರೊನಾ ಅಳೆ ಅಪ್ಪಳಿಸುವ ಬಗ್ಗೆ ಆರೋಗ್ಯ ಇಲಾಖೆ ಎಚ್ಚರಿಕೆಯ ಸಂದೇಶ ನೀಡಿತ್ತು. ಅದರಲ್ಲೂ ಚಳಿಗಾಲ ಆರಂಭವಾಗ್ತಿರೋ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಾಗುವ ಆತಂಕ ಕೂಡ ಹೆಚ್ಚಿದೆ. ಹೀಗಾಗಿ ಪಾಲಿಕೆ ಈಗಿನಿಂದಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು ಡಿಸೆಂಬರ್ 31ರಂದು ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವರ್ಷಾಚರಣೆಗೆ ಬ್ರೇಕ್ ಹಾಕಲು ಮುಂದಾಗಿದೆ.
ಪ್ರತಿ ವರ್ಷ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸೆಲೆಬ್ರೇಷನ್ ಜೋರಾಗಿರುತ್ತಿತ್ತು. ಜನ ಮೋಜು ಮಸ್ತಿ ಮಾಡುತ್ತ ಡಿಜೆ ಎಂಜಾಯ್ ಮಾಡುತ್ತ ಕುಣಿದು ಕುಪ್ಪಳಿಸಿ ಹೊಸ ವರ್ಷವನ್ನು ಬರ ಮಾಡಿಕೊಳ್ಳುತ್ತಿದ್ದರು. ಆದರೆ ಕೊರೊನಾದಿಂದಾಗಿ ಈ ಸೆಲೆಬ್ರೇಷನ್ಗೆ ಬ್ರೇಕ್ ಬೀಳಲಿದೆ. ಇನ್ನು ಮನೆಗಳಲ್ಲಿ ಸರಳವಾಗಿ ಆಚರಣೆ ಮಾಡುವಂತೆ ಪಾಲಿಕೆ ಮನವಿ ಮಾಡಿಕೊಂಡಿದೆ.
Published On - 1:15 pm, Thu, 12 November 20