BBMP ಚುನಾವಣೆ ಮುಂದೂಡುವಿಕೆಗೆ ಸರ್ಕಾರಿ ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ನಾಳೆ ವಿಚಾರಣೆ

| Updated By: ಸಾಧು ಶ್ರೀನಾಥ್​

Updated on: Dec 17, 2020 | 11:16 AM

2007ರಲ್ಲಿ ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 198ಕ್ಕೆ ಹೆಚ್ಚಿಸಲಾಗಿತ್ತು. ಆ ಬಳಿಕ ನಗರದಲ್ಲಿ ಜನಸಂಖ್ಯೆ ಹೆಚ್ಚಳವಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ವಾರ್ಡ್‌ಗಳ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ ಎಂಬುದು ಸರ್ಕಾರದ ವಾದ.

BBMP ಚುನಾವಣೆ ಮುಂದೂಡುವಿಕೆಗೆ ಸರ್ಕಾರಿ ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ನಾಳೆ ವಿಚಾರಣೆ
ಸುಪ್ರೀಂ ಕೋರ್ಟ್
Follow us on

ಬೆಂಗಳೂರು: ಬಿಬಿಎಂಪಿ ಚುನಾವಣೆ ಮುಂದೂಡುವಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದರ ವಿಚಾರಣೆ ನಾಳೆ (ಡಿಸೆಂಬರ್ 18) ನಡೆಯಲಿದೆ.

1976ರ ಕೆಎಂಸಿ ಕಾಯ್ದೆಗೆ (ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ) ತಿದ್ದುಪಡಿ ತಂದು ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ನಡೆಸಿರಲಿಲ್ಲ. ಆದರೆ, ಬಿಬಿಎಂಪಿ ಚುನಾಯಿತ ಕೌನ್ಸಿಲ್ ಅವಧಿ 2020 ಸೆಪ್ಟೆಂಬರ್ 10ಕ್ಕೆ ಮುಗಿದಿತ್ತು. ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ಮುಖಂಡರಾದ ಎಂ.ಶಿವರಾಜು ಹಾಗೂ ಅಬ್ದುಲ್‌ ವಾಜಿದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠವು, ವಾರ್ಡ್‌ವಾರು ಮೀಸಲಾತಿಯ ಅಂತಿಮ ಪಟ್ಟಿ ಪ್ರಕಟವಾದ ಆರು ವಾರಗಳ ಒಳಗೆ ಚುನಾವಣೆ ಪೂರ್ಣಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.  ಆಗ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಡಿ. 10ರಂದು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

2007ರಲ್ಲಿ ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 198ಕ್ಕೆ ಹೆಚ್ಚಿಸಲಾಗಿತ್ತು. ಆ ಬಳಿಕ ನಗರದಲ್ಲಿ ಜನಸಂಖ್ಯೆ ಹೆಚ್ಚಳವಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ವಾರ್ಡ್‌ಗಳ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ ಎಂಬುದು ಸರ್ಕಾರದ ವಾದ. ಬೆಂಗಳೂರು ನಗರದ ಸುಧಾರಣೆಗಾಗಿ ವಾರ್ಡ್‌ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಹೆಚ್ಚಿಸುವ ಉದ್ದೇಶದಿಂದ ಕೆಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಸರ್ಕಾರ ಮೇಲ್ಮನವಿ ಅರ್ಜಿಯಲ್ಲಿ ಹೇಳಿದೆ.

ತಕ್ಷಣ ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ