ಕೊವಿಡ್​ ನಿಯಮ ಉಲ್ಲಂಘಿಸಿ ಚುನಾವಣಾ ಪ್ರಚಾರ: ನಟ ದರ್ಶನ್​ ವಿರುದ್ಧ ಪ್ರಕರಣ ದಾಖಲು

  • TV9 Web Team
  • Published On - 13:54 PM, 1 Nov 2020
ಕೊವಿಡ್​ ನಿಯಮ ಉಲ್ಲಂಘಿಸಿ ಚುನಾವಣಾ ಪ್ರಚಾರ: ನಟ ದರ್ಶನ್​ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದಲ್ಲಿ ಒಟ್ಟು 7 ಕೇಸ್​ ದಾಖಲಾಗಿದೆ. ಪ್ರಚಾರದ ವೇಳೆ ಕೊವಿಡ್ ನಿಯಮ ಉಲ್ಲಂಘನೆ ಆರೋಪದಡಿ ಬಿಜೆಪಿ ವಿರುದ್ಧ 4, JDS ವಿರುದ್ಧ 2, ‘ಕೈ’ ವಿರುದ್ಧ 1 ಕೇಸ್ ದಾಖಲಾಗಿದೆ ಎಂದು ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಪರ ನಟ ದರ್ಶನ್ ಪ್ರಚಾರ ಮಾಡುವ ವೇಳೆ ಕೊವಿಡ್-19 ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಪ್ರಚಾರ ಸಂಬಂಧವೂ ಪ್ರಕರಣ ದಾಖಲಾಗಿದೆ ಎಂದು ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ.