ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರತಿ ವಾರ್ಡ್‌ನಲ್ಲಿ ಕೋವಿಡ್ ಟೆಸ್ಟ್ ಸೆಂಟರ್
ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಕೋರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಟೆಸ್ಟ್‌ಗಳನ್ನು ಹೆಚ್ಚಿಸಲು ಮುಂದಾಗಿದ್ದು, ಈಗ ಪ್ರತಿ ವಾರ್ಡ್‌ನಲ್ಲೂ ಕೊವಿಡ್ ಟೆಸ್ಟ್ ಮಾಡಲು ಮುಂದಾಗಿದೆ. ಹೌದು ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಈಗ ಬಿಬಿಎಂಪಿ ಪ್ರತಿ ವಾರ್ಡ್ ಗಳಲ್ಲೂ ಕೋವಿಡ್ ಟೆಸ್ಟ್ ಸೆಂಟರ್ ಅನ್ನು ಆರಂಭಿಸುತ್ತಿದೆ. ಪ್ರತಿನಿತ್ಯ ಬೆಳಗ್ಗೆ ೧೦ ಗಂಟೆಯಿಂದ ಸಂಜೆ 5 ಗಂಟೆವರೆಗೂ ಟೆಸ್ಟಿಂಗ್ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ಈ ಸಂಬಂಧ ಈಗ ಬಿಬಿಎಂಪಿ ದಕ್ಷಿಣ […]

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಕೋರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಟೆಸ್ಟ್‌ಗಳನ್ನು ಹೆಚ್ಚಿಸಲು ಮುಂದಾಗಿದ್ದು, ಈಗ ಪ್ರತಿ ವಾರ್ಡ್‌ನಲ್ಲೂ ಕೊವಿಡ್ ಟೆಸ್ಟ್ ಮಾಡಲು ಮುಂದಾಗಿದೆ.
ಹೌದು ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಈಗ ಬಿಬಿಎಂಪಿ ಪ್ರತಿ ವಾರ್ಡ್ ಗಳಲ್ಲೂ ಕೋವಿಡ್ ಟೆಸ್ಟ್ ಸೆಂಟರ್ ಅನ್ನು ಆರಂಭಿಸುತ್ತಿದೆ. ಪ್ರತಿನಿತ್ಯ ಬೆಳಗ್ಗೆ ೧೦ ಗಂಟೆಯಿಂದ ಸಂಜೆ 5 ಗಂಟೆವರೆಗೂ ಟೆಸ್ಟಿಂಗ್ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ.
ಈ ಸಂಬಂಧ ಈಗ ಬಿಬಿಎಂಪಿ ದಕ್ಷಿಣ ವಲಯದಲ್ಲಿ ಮೊಬೈಲ್ ಟೆಸ್ಟಿಂಗ್ ವ್ಯಾನ್ ಮೂಲಕ ಉಚಿತ ಪರೀಕ್ಷೆ ಆರಂಭಿಸಿದೆ. ದಕ್ಷಿಣ ವಲಯ ಜಂಟಿಆಯುಕ್ತ ವೀರಭದ್ರಸ್ವಾಮಿ ನೇತೃತ್ವದಲ್ಲಿ ಕೋವಿಡ್ ಟೆಸ್ಟಿಂಗ್ ಆರಂಭವಾಗಿದೆ. ಟೆಸ್ಟ್ ಮಾಡಿಸಿಕೊಳ್ಳಲು ಬರುವವರು ಸಹಾಯವಾಣಿ ನಂಬರ್ 8431816718 ಗೆ ಕರೆ ಮಾಡಬಹುದು ಎಂದು ಬಿಬಿಎಂಪಿ ತಿಳಿಸಿದೆ.



