ಈ ಕರಡಿ ಕುಣಿತ ಘೋರ, ನಗರಸಭೆ ಮಾಜಿ ಸದಸ್ಯೆ ಮೇಲೆ ಭೀಕರ ದಾಳಿ

ರಾಮನಗರ: ಚನ್ನಪಟ್ಟಣ ನಗರದಲ್ಲಿ ಕರಡಿಯೊಂದು ಪ್ರತ್ಯಕ್ಷಗೊಂಡು, ಮಹಿಳೆ ಮೇಲೆ ಭೀಕರ ದಾಳಿ ನಡೆಸಿದೆ. ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಕರಡಿ ಕಾಣಿಸಿಕೊಂಡಿದೆ. ಇಡೀ ನಗರ ಪ್ರದಕ್ಷಿಣೆ ಹಾಕಿರುವ ಆ ಕರಡಿ ಬೆಳಗಿನ ಜಾವ ಆರು ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಬಂದ ನಗರಸಭಾ ಮಾಜಿ ಸದಸ್ಯೆ ಸಾಕಮ್ಮ (೬೫) ಎಂಬ ವೃದ್ಧೆಯ ಮೇಲೆ ಕಾಂಪೌಂಡ್ ನಲ್ಲಿಯೇ ಹಠಾತ್ ದಾಳಿ ನಡೆಸಿದೆ. ಕಾಂಪೌಂಡ್ ನಲ್ಲಿ ಅಡಗಿ ಕುಳಿತಿದ್ದ ಕರಡಿ ಏಕಾಏಕಿ‌ ಮಹಿಳೆಯ […]

ಈ ಕರಡಿ ಕುಣಿತ ಘೋರ, ನಗರಸಭೆ ಮಾಜಿ ಸದಸ್ಯೆ ಮೇಲೆ ಭೀಕರ ದಾಳಿ
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:May 27, 2020 | 2:16 PM

ರಾಮನಗರ: ಚನ್ನಪಟ್ಟಣ ನಗರದಲ್ಲಿ ಕರಡಿಯೊಂದು ಪ್ರತ್ಯಕ್ಷಗೊಂಡು, ಮಹಿಳೆ ಮೇಲೆ ಭೀಕರ ದಾಳಿ ನಡೆಸಿದೆ. ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಕರಡಿ ಕಾಣಿಸಿಕೊಂಡಿದೆ. ಇಡೀ ನಗರ ಪ್ರದಕ್ಷಿಣೆ ಹಾಕಿರುವ ಆ ಕರಡಿ ಬೆಳಗಿನ ಜಾವ ಆರು ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಬಂದ ನಗರಸಭಾ ಮಾಜಿ ಸದಸ್ಯೆ ಸಾಕಮ್ಮ (೬೫) ಎಂಬ ವೃದ್ಧೆಯ ಮೇಲೆ ಕಾಂಪೌಂಡ್ ನಲ್ಲಿಯೇ ಹಠಾತ್ ದಾಳಿ ನಡೆಸಿದೆ.

ಕಾಂಪೌಂಡ್ ನಲ್ಲಿ ಅಡಗಿ ಕುಳಿತಿದ್ದ ಕರಡಿ ಏಕಾಏಕಿ‌ ಮಹಿಳೆಯ ಮೇಲೆ ಎರಗಿದೆ. ಅವರ ಮುಖವನ್ನು ಸಂಪೂರ್ಣವಾಗಿ ಪರಚಿ ಹಾಕಿದೆ. ಸಹಾಯಕ್ಕೆ ತೆರಳಿದ ಅವರ ಪುತ್ರ ಸುಧೀರ್ (೪೦) ಮೇಲೆ ಸಹ ದಾಳಿ ನಡೆಸಿ, ಗಾಯಗೊಳಿಸಿದೆ. ಸಾಕಮ್ಮನವರಿಗೆ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸಂಜಯ ಗಾಂಧಿ ಆಸ್ಪತ್ರೆಗೆ ಕಳುಹಿಸಿಲಾಗಿದೆ.

ಕರಡಿ ದಾಳಿಯಿಂದ ಎಚ್ಚೆತ್ತುಕೊಂಡ ಸುತ್ತಮುತ್ತಲ ಜನರ ಕೂಗು ಜೋರಾದಂತೆ ಕರಡಿ ಪರಾರಿಯಾಗಿದೆ. ಘಟನೆ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:13 pm, Wed, 27 May 20

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ