ಚಾಮುಂಡೇಶ್ವರಿ ದೇವಿ ಮೇಲೆ ಪ್ರಮಾಣ ಮಾಡಿ.. ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

ಚಾಮುಂಡೇಶ್ವರಿ ದೇವಿ ಮೇಲೆ ಪ್ರಮಾಣ ಮಾಡಿ.. ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

ಬೆಳಗಾವಿ: ತಮ್ಮ ವಿರುದ್ಧ ಕೇಳಿ ಬಂದಿರುವ ಅಕ್ರಮ ಆಸ್ತಿ ಸಂಪಾದನೆ ಕುರಿತಾದ ಆರೋಪಗಳ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಇದು ದಸರಾ ಸಂದರ್ಭ. ಹಾಗಾಗಿ ತಾಯಿ ಚಾಮುಂಡೇಶ್ವರಿ ದೇವಿ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ನಾನು ಯಾವುದೇ ಅಕ್ರಮ ಆಸ್ತಿಯನ್ನ ಸಂಪಾದನೆ ಮಾಡಿಲ್ಲ ಎಂದು ಹೇಳಿದ್ದಾರೆ.

ಅಕ್ರಮ ಆಸ್ತಿ ಸಂಪಾದಿಸಿದ್ರೆ ಅಷ್ಟನ್ನೂ ಬೊಕ್ಕಸಕ್ಕೆ ಬರೆದುಕೊಡ್ತೇನೆ. ನನ್ನ ಸೋದರನ ಹರ್ಷ ಶುಗರ್ಸ್‌ನಲ್ಲಿ ಯಾವುದೇ ಅವ್ಯವಹಾರವಾಗಿಲ್ಲ. ಸಂಬಂಧಪಟ್ಟ ದಾಖಲೆಗಳು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಬಳಿ ಇದೆ ಎಂದು ತಿಳಿಸಿದರು.

ತುಮಕೂರು ಡಿಸಿಸಿ ಬ್ಯಾಂಕ್‌ನಲ್ಲಿ ಲೋನ್ ಪಡೆದ ವಿಚಾರವಾಗಿ ಮಾತನಾಡಿದ ಅವರು ಕಾನೂನು ಚೌಕಟ್ಟಿನಡಿಯೇ ನಾನು ಲೋನ್ ಪಡೆದಿದ್ದೇನೆ ಎಂದು ಹೇಳಿದರು.

Click on your DTH Provider to Add TV9 Kannada