ಮಸೀದಿಯಲ್ಲಿ ಕ್ವಾರಂಟೈನ್​: ಇಂಡೋನೇಷ್ಯಾದ 10, ದಿಲ್ಲಿಯ ಇಬ್ಬರು ನೇರ ಪೊಲೀಸರ ವಶಕ್ಕೆ!

ಬೆಳಗಾವಿ: ವೀಸಾ ನಿಯಮ ಉಲ್ಲಂಘಿಸಿ ಧಾರ್ಮಿಕ ಪ್ರಚಾರ ನಡೆಸಿದ ಆರೋಪದ ಮೇರೆಗೆ ಇಂಡೋನೇಷ್ಯಾದ 10 ಮತ್ತು ದೆಹಲಿಯ ಇಬ್ಬರು ಸೇರಿ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 12 ಮಂದಿಯಲ್ಲಿ ಐವರು ಮಹಿಳೆಯರು ಇದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿ 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬೆಳಗಾವಿ ನಗರದ ಮಾಳಮಾರುತಿ ಠಾಣೆ ಪೊಲೀಸರು ಹಾಜರುಪಡಿಸಲಿದ್ದಾರೆ. ಮಾರ್ಚ್ 11 ರಂದು ದೆಹಲಿಯಿಂದ ಬೆಳಗಾವಿಗೆ 12 ಜನರು ಬಂದಿದ್ದರು. ಮಾರ್ಚ್ 11ರಿಂದ ಮಾರ್ಚ್ 16ರವರೆಗೆ ನಗರದ ವಿವಿಧ ಮಸೀದಿಗಳಲ್ಲಿ ಧಾರ್ಮಿಕ ಪ್ರಚಾರ ಮಾಡಿದ್ರು. […]

ಮಸೀದಿಯಲ್ಲಿ ಕ್ವಾರಂಟೈನ್​: ಇಂಡೋನೇಷ್ಯಾದ 10, ದಿಲ್ಲಿಯ ಇಬ್ಬರು ನೇರ ಪೊಲೀಸರ ವಶಕ್ಕೆ!
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 02, 2020 | 5:54 PM

ಬೆಳಗಾವಿ: ವೀಸಾ ನಿಯಮ ಉಲ್ಲಂಘಿಸಿ ಧಾರ್ಮಿಕ ಪ್ರಚಾರ ನಡೆಸಿದ ಆರೋಪದ ಮೇರೆಗೆ ಇಂಡೋನೇಷ್ಯಾದ 10 ಮತ್ತು ದೆಹಲಿಯ ಇಬ್ಬರು ಸೇರಿ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 12 ಮಂದಿಯಲ್ಲಿ ಐವರು ಮಹಿಳೆಯರು ಇದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿ 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬೆಳಗಾವಿ ನಗರದ ಮಾಳಮಾರುತಿ ಠಾಣೆ ಪೊಲೀಸರು ಹಾಜರುಪಡಿಸಲಿದ್ದಾರೆ.

ಮಾರ್ಚ್ 11 ರಂದು ದೆಹಲಿಯಿಂದ ಬೆಳಗಾವಿಗೆ 12 ಜನರು ಬಂದಿದ್ದರು. ಮಾರ್ಚ್ 11ರಿಂದ ಮಾರ್ಚ್ 16ರವರೆಗೆ ನಗರದ ವಿವಿಧ ಮಸೀದಿಗಳಲ್ಲಿ ಧಾರ್ಮಿಕ ಪ್ರಚಾರ ಮಾಡಿದ್ರು. ವೀಸಾ ನಿಯಮ ಉಲ್ಲಂಘನೆ ಆರೋಪದಡಿ ಏಪ್ರಿಲ್ 10ರಂದು ಮಾಳಮಾರುತಿ ಠಾಣೆಯಲ್ಲಿ 10 ಜನರ ವಿರುದ್ಧ FIR ದಾಖಲಾಗಿತ್ತು.

ಮಾರ್ಚ್ 16ರಿಂದ ಜೂನ್ 1ರವರೆಗೆ ಮಸೀದಿಯೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದರು. ಕೊವಿಡ್ ವರದಿ ನೆಗೆಟಿವ್ ಹಾಗೂ ಕ್ವಾರಂಟೈನ್ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಐವರು ಮಹಿಳೆಯರು ಸೇರಿ 12 ಜನರನ್ನು ವಶಕ್ಕೆ ಪಡೆದಿದ್ದಾರೆ.


Published On - 2:09 pm, Tue, 2 June 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us