ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿ 12 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸವದತ್ತಿ (Savadatti) ತಾಲೂಕಿನ ಕರಿಕಟ್ಟಿ ರಸ್ತೆಯಲ್ಲಿ ನಡೆದಿದೆ. ಗಾಯಾಳು ಮಕ್ಕಳಿಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವಿದ್ಯಾರ್ಥಿಯನ್ನು ಧಾರವಾಡದ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸವದತ್ತಿಯ ಕುಮಾರೇಶ್ವರ ಶಾಲೆಗೆ ಸೇರಿದ್ದ ವಾಹನ ಬೆಳಗ್ಗೆ 38 ಮಕ್ಕಳನ್ನು ಶಾಲೆಗೆ ಕರೆತರುತ್ತಿತ್ತು. ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಎಲೆಕ್ಟ್ರಾನಿಕ್ ಸಿಟಿ ಫ್ಲೈವರ್ ಮೇಲೆ ಅಪಘಾತ, ಓರ್ವ ಸಾವು
ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈವರ್ ಮೇಲೆ ಬೈಕ್ಗೆ, ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರ ಪ್ರಕಾಶ್(56) ಮೃತ ದುರ್ದೈವಿ. ಪ್ರಕಾಶ್
ಹೊಸೂರು ರಸ್ತೆಯಿಂದ ಫ್ಲೈಓವರ್ ಕಡೆ ತೆರಳುತ್ತಿದ್ದರು. ಈ ವೇಳೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ್ದಾನೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:58 pm, Sat, 12 November 22