ಕಾರು ಪಲ್ಟಿ: ಬೆಂಗಳೂರಿನ ಯುವ ಪೇದೆ ದುರ್ಮರಣ

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಪೇದೆ ಮೃತಪಟ್ಟಿರುವ ಘಟನೆ ಹಿರಿಯೂರು ತಾಲೂಕಿನ ಮರಡಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಬೆಂಗಳೂರಿನ ಸಶಸ್ತ್ರ ಮೀಸಲು ಪಡೆಯ ಪೇದೆ ಹನುಮಂತರಾಯ(35) ಮೃತಪಟ್ಟವರು. ಕಲಬುರಗಿಯಿಂದ ಬೆಂಗಳೂರಿಗೆ ತೆರಳುವ ವೇಳೆ ಟೈರ್ ಸ್ಫೋಟ ಆಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿದೆ. ಕಾರಲ್ಲಿದ್ದ ಐವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು ಪಲ್ಟಿ: ಬೆಂಗಳೂರಿನ ಯುವ ಪೇದೆ ದುರ್ಮರಣ
Follow us
|

Updated on:May 18, 2020 | 12:11 PM

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಪೇದೆ ಮೃತಪಟ್ಟಿರುವ ಘಟನೆ ಹಿರಿಯೂರು ತಾಲೂಕಿನ ಮರಡಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಬೆಂಗಳೂರಿನ ಸಶಸ್ತ್ರ ಮೀಸಲು ಪಡೆಯ ಪೇದೆ ಹನುಮಂತರಾಯ(35) ಮೃತಪಟ್ಟವರು.

ಕಲಬುರಗಿಯಿಂದ ಬೆಂಗಳೂರಿಗೆ ತೆರಳುವ ವೇಳೆ ಟೈರ್ ಸ್ಫೋಟ ಆಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿದೆ. ಕಾರಲ್ಲಿದ್ದ ಐವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 11:19 am, Mon, 18 May 20

ತಾಜಾ ಸುದ್ದಿ