ಬಂಧಿತ ಆರೋಪಿಗೆ ಸೋಂಕು: CCB ಕಚೇರಿ ಸೀಲ್‌ಡೌನ್, ಪೊಲೀಸರಿಗೂ ಕ್ವಾರಂಟೈನ್!
ಬೆಂಗಳೂರು: ಬಂಧಿತ ಆರೋಪಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢವಾಗುತ್ತಿದ್ದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ ಪೊಲೀಸರಲ್ಲಿ ತಳಮಳ ಶುರುವಾಗಿದೆ. ಈ ಸಂಬಂಧ ಸೋಂಕಿತನ ಸಂಪರ್ಕದಲ್ಲಿದ್ದ ಏಳು ಜನ ಸಿಸಿಬಿ ಪೊಲೀಸ್ ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಲಾಗಿದೆ. ಇನ್ನುಳಿದ ಸಿಬ್ಬಂದಿ ಅಂದ್ರೆ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಮಲ್ಲೇಶ್ವರದಲ್ಲಿರುವ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೊವಿಡ್-19 ಟೆಸ್ಟ್‌ಗೆ ಒಳಪಡಿಸಲಾಗಿದೆ. ಈ ಸಿಬ್ಬಂದಿಯ ಗಂಟಲು ದ್ರವದ ಸ್ಯಾಂಪಲ್ ಪಡೆದಿದ್ದು ಲ್ಯಾಬ್ ಪರೀಕ್ಷೆಗೆ ಕಳಿಸಲಾಗಿದೆ. ಇನ್ನೊಂದೆಡೆ ಕೇಂದ್ರ ಅಪರಾಧ ದಳದ ಕಚೇರಿಯನ್ನ(CCB) ತಕ್ಷಣದಿಂದಲೇ ಸೀಲ್‌ಡೌನ್ ಮಾಡಲಾಗಿದೆ. ಇದರ […]
ಬೆಂಗಳೂರು: ಬಂಧಿತ ಆರೋಪಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢವಾಗುತ್ತಿದ್ದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ ಪೊಲೀಸರಲ್ಲಿ ತಳಮಳ ಶುರುವಾಗಿದೆ.
ಈ ಸಂಬಂಧ ಸೋಂಕಿತನ ಸಂಪರ್ಕದಲ್ಲಿದ್ದ ಏಳು ಜನ ಸಿಸಿಬಿ ಪೊಲೀಸ್ ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಲಾಗಿದೆ. ಇನ್ನುಳಿದ ಸಿಬ್ಬಂದಿ ಅಂದ್ರೆ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಮಲ್ಲೇಶ್ವರದಲ್ಲಿರುವ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೊವಿಡ್-19 ಟೆಸ್ಟ್‌ಗೆ ಒಳಪಡಿಸಲಾಗಿದೆ. ಈ ಸಿಬ್ಬಂದಿಯ ಗಂಟಲು ದ್ರವದ ಸ್ಯಾಂಪಲ್ ಪಡೆದಿದ್ದು ಲ್ಯಾಬ್ ಪರೀಕ್ಷೆಗೆ ಕಳಿಸಲಾಗಿದೆ.
ಇನ್ನೊಂದೆಡೆ ಕೇಂದ್ರ ಅಪರಾಧ ದಳದ ಕಚೇರಿಯನ್ನ(CCB) ತಕ್ಷಣದಿಂದಲೇ ಸೀಲ್‌ಡೌನ್ ಮಾಡಲಾಗಿದೆ. ಇದರ ಬೆನ್ನಲ್ಲೇ ಆರೋಗ್ಯಾಧಿಕಾರಿಗಳು ಸಿಸಿಬಿ ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿದ್ದಾರೆ.
Published On - 4:57 pm, Fri, 12 June 20