ತಮ್ಮ ವಿರುದ್ಧ ಸುದ್ದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ; 6 ಸಚಿವರ ಅರ್ಜಿ ವಿಚಾರಣೆ ಮೇ 29ಕ್ಕೆ ಮುಂದೂಡಿಕೆ

ರಾಜಕೀಯ ಷಡ್ಯಂತ್ರದ ಗುಮಾನಿ ಹಿನ್ನೆಲೆಯಿಂದಾಗಿ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಟ್ವಿಟ್ಟರ್ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದರು.

ತಮ್ಮ ವಿರುದ್ಧ ಸುದ್ದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ; 6 ಸಚಿವರ ಅರ್ಜಿ ವಿಚಾರಣೆ ಮೇ 29ಕ್ಕೆ ಮುಂದೂಡಿಕೆ
ಮೇಯೊಹಾಲ್ ಕೋರ್ಟ್ ಬೆಂಗಳೂರು
Follow us
TV9 Web
| Updated By: ganapathi bhat

Updated on:Apr 05, 2022 | 1:01 PM

ಬೆಂಗಳೂರು: ತಮ್ಮ ವಿರುದ್ಧ ಸುದ್ದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಕೋರಿ 6 ಸಚಿವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮೇ 29ಕ್ಕೆ ಮುಂದೂಡಲಾಗಿದೆ. ಬೆಂಗಳೂರಿನ ಮೆಯೋ ಹಾಲ್ ಕೋರ್ಟ್‌ ಈ ಆದೇಶ ನೀಡಿದ್ದು, ಮಧ್ಯಂತರ ಆದೇಶವನ್ನು ಮೇ 29ರವರೆಗೆ ವಿಸ್ತರಿಸಿದೆ. ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್‌.ಟಿ.ಸೋಮಶೇಖರ್, ಕೆ.ಸುಧಾಕರ್, ನಾರಾಯಣಗೌಡ ಹಾಗೂ ಭೈರತಿ ಬಸವರಾಜ್ ನಿರ್ಬಂಧ ಕೋರಿದ್ದರು.

ರಾಜಕೀಯ ಷಡ್ಯಂತ್ರದ ಗುಮಾನಿ ಹಿನ್ನೆಲೆಯಿಂದಾಗಿ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಟ್ವಿಟ್ಟರ್ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದರು. ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ ಎಂದು ತಿಳಿಸಿದ್ದರು.

ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ.. ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವೆ.

ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಮುಂದಿನ ನಡೆ ತೀರ್ಮಾನಕ್ಕೆ ಜಾರಕಿಹೊಳಿ ಸಹೋದರರ ಮಾತುಕತೆ: ರಮೇಶ್, ಬಾಲಚಂದ್ರ, ಲಖನ್ ಭಾಗಿ?

ಇದನ್ನೂ ಓದಿ: ಸಿಡಿ ಸಂತ್ರಸ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​; ಮಗಳ ಹೇಳಿಕೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ತಂದೆ

Published On - 7:42 pm, Wed, 31 March 21