ಹಲ್ಲೆಗೆ ಯತ್ನಿಸಿದ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..
ಹಲವು ದರೋಡೆ ಕೇಸ್‌ನಲ್ಲಿ ಬೇಕಾಗಿದ್ದ ಆರೋಪಿ ರಾಜೇಶ್ನನ್ನ ಬಂಧಿಸಲು ಬ್ಯಾಡರಹಳ್ಳಿ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಶ್ರೀನಿವಾಸ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ ಆರೋಪಿ ರಾಜೇಶ್ ಬಲಗಾಲಿಗೆ ಬ್ಯಾಡರಹಳ್ಳಿ ಇನ್ಸ್ ಪೆಕ್ಟರ್ ರಾಜೀವ್ ಗೌಡ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು: ದರೋಡೆ ಕೇಸ್ ಆರೋಪಿ ರಾಜೇಶ್ ಬಲಗಾಲಿಗೆ ಗುಂಡು ಹಾರಿಸಿ ಆತನನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ಬ್ರಹ್ಮದೇವರಗುಡ್ಡದಲ್ಲಿ ನಡೆದಿದೆ.
ಹಲವು ದರೋಡೆ ಕೇಸ್‌ನಲ್ಲಿ ಬೇಕಾಗಿದ್ದ ಆರೋಪಿ ರಾಜೇಶ್ನನ್ನ ಬಂಧಿಸಲು ಬ್ಯಾಡರಹಳ್ಳಿ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಶ್ರೀನಿವಾಸ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ ಆರೋಪಿ ರಾಜೇಶ್ ಬಲಗಾಲಿಗೆ ಬ್ಯಾಡರಹಳ್ಳಿ ಇನ್ಸ್ ಪೆಕ್ಟರ್ ರಾಜೀವ್ ಗೌಡ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಗಾಯಗೊಂಡ ಹೆಡ್ ಕಾನ್ಸ್ಟೇಬಲ್ ಹಾಗೂ ಆರೋಪಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಳ್ಳಂ ಬೆಳಗ್ಗೆ ಖಾಕಿ ಗನ್ ಸದ್ದು.. ದರೋಡೆ, ಹತ್ಯೆ ಸಂಚು ರೂಪಿಸಿದ್ದ ಆರೋಪಿ ಮೇಲೆ ಫೈರಿಂಗ್