AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸರ ವಿನೂತನ ಪ್ರಯತ್ನ: ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ನಡೆಯಲಿದೆ ಈ ಕಾರ್ಯಕ್ರಮ, ಏನದು?

ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ಜನಸಂಪರ್ಕ ಸಭೆ ನಡೆಸಲು ಬೆಂಗಳೂರು ಪೊಲೀಸರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಇಂದಿನಿಂದ ಪ್ರಾಯೋಗಿಕವಾಗಿ ಕಮಿಷನರ್ ಕಮಲ್​ ಪಂಥ್ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಪ್ರತಿ ನಾಲ್ಕನೇ ಶನಿವಾರ ಬೆಳಿಗ್ಗೆ 11 ಗಂಟೆಯಿಂದ 1 ಗಂಟೆವರೆಗೂ ಸಭೆ ನಡೆಯಲಿದೆ.

ಬೆಂಗಳೂರು ಪೊಲೀಸರ ವಿನೂತನ ಪ್ರಯತ್ನ: ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ನಡೆಯಲಿದೆ ಈ ಕಾರ್ಯಕ್ರಮ, ಏನದು?
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
ಪೃಥ್ವಿಶಂಕರ
|

Updated on: Nov 28, 2020 | 9:17 AM

Share

ಬೆಂಗಳೂರು: ನಾಗರೀಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಲುವಾಗಿ ಬೆಂಗಳೂರು ಪೊಲೀಸರು ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಇನ್ಮುಂದೆ ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ಜನಸಂಪರ್ಕ ಸಭೆ ನಡೆಸಲು ಬೆಂಗಳೂರು ಪೊಲೀಸರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಇಂದಿನಿಂದ ಪ್ರಾಯೋಗಿಕವಾಗಿ ಕಮಿಷನರ್ ಕಮಲ್​ ಪಂಥ್ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಪ್ರತಿ ನಾಲ್ಕನೇ ಶನಿವಾರ ಬೆಳಿಗ್ಗೆ 11 ಗಂಟೆಯಿಂದ 1 ಗಂಟೆವರೆಗೂ ಸಭೆ ನಡೆಯಲಿದೆ.

ಜನಸಂಪರ್ಕದಲ್ಲಿ ಕಮಿಷನರ್ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗುತ್ತದೆ. 11 ಗಂಟೆಗೆ ಪುಲಕೇಶಿನಗರ ಠಾಣೆಯಲ್ಲಿ ಅಹವಾಲು ಸ್ವೀಕರಿಸಲಿರುವ ಕಮಿಷನರ್ ಕಮಲ್ ಪಂಥ್, ಮಧ್ಯಾಹ್ನ 12:10 ರಿಂದ ಮಲ್ಲೇಶ್ವರಂ ಠಾಣೆಯಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.

ಜೊತೆಗೆ ಪೂರ್ವ, ಪಶ್ಚಿಮ ವಲಯದ ಹೆಚ್ಚುವರಿ ಆಯುಕ್ತರಿಂದಲೂ ಜನಸಂಪರ್ಕ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಸಿಸಿಬಿ ಜಂಟಿ ಆಯುಕ್ತರು ಹಾಗೂ ಎಲ್ಲಾ ವಿಭಾಗದ ಡಿಸಿಪಿಗಳು ವಿವಿಧ ಠಾಣೆಯಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಿದ್ದು, ತಮ್ಮ ಕುಂದು ಕೊರತೆಗಳು ಹಾಗೂ ದೂರುಗಳನ್ನು ನೀಡಲು ಮನವಿ ಮಾಡಲಾಗಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್