ಬೆಂಗಳೂರಿನ ಜನಾಂಗೀಯ ನಿಂದನೆ ಪ್ರಕರಣಕ್ಕೆ ಟ್ವಿಸ್ಟ್: ಹೆಂಡತಿಗೆ ಹೆದರಿ ಹೊಸ ಕಥೆ ಕಟ್ಟಿದ, ಪೊಲೀಸ್​ ತನಿಖೆಯಲ್ಲಿ ಬಾಯ್ಬಿಟ್ಟ

‘ಚೀನೀ’ ಎಂದು ನಿಂದಿಸಿ ಅಸ್ಸಾಂ ಮೂಲದ ದಿನೇಶ್​ ಎಂಬುವರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಟ್ವಿಸ್ಟ್​​ ಸಿಕ್ಕಿದೆ. ದಿನೇಶ್ ಕುಡಿದ ಮತ್ತಿನಲ್ಲಿ ಪೊಲೀಸರಿಗೆ ಜನಾಂಗೀಯ ನಿಂದನೆ ಕಥೆ ಕಟ್ಟಿರುವುದು ತನಿಖೆ ವೇಳೆ ಬಯಲಾಗಿದೆ.

ಬೆಂಗಳೂರಿನ ಜನಾಂಗೀಯ ನಿಂದನೆ ಪ್ರಕರಣಕ್ಕೆ ಟ್ವಿಸ್ಟ್: ಹೆಂಡತಿಗೆ ಹೆದರಿ ಹೊಸ ಕಥೆ ಕಟ್ಟಿದ, ಪೊಲೀಸ್​ ತನಿಖೆಯಲ್ಲಿ ಬಾಯ್ಬಿಟ್ಟ
ದಿನೇಶ್​​ (ಎಡಚಿತ್ರ) ಎಫ್​ಐಆರ್​ (ಬಲಚಿತ್ರ)
Follow us
Jagadisha B
| Updated By: ವಿವೇಕ ಬಿರಾದಾರ

Updated on:Aug 20, 2023 | 11:50 AM

ಬೆಂಗಳೂರು (ಆ.20): ‘ಚೀನೀ’ ಎಂದು ನಿಂದಿಸಿ ಅಸ್ಸಾಂ (Assam) ಮೂಲದ ದಿನೇಶ್​ ಎಂಬುವರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಟ್ವಿಸ್ಟ್​​ ಸಿಕ್ಕಿದೆ. ದಿನೇಶ್ ಕುಡಿದ ಮತ್ತಿನಲ್ಲಿ ಪೊಲೀಸರಿಗೆ (Police) ಜನಾಂಗೀಯ ನಿಂದನೆ ಕಥೆ ಕಟ್ಟಿರುವುದು ತನಿಖೆ ವೇಳೆ ಬಯಲಾಗಿದೆ. ಮುಖದ ಮೇಲಿನ ಗಾಯಗಳನ್ನು ನೋಡಿ ಎಲ್ಲಿ ತನ್ನ ಪತ್ನಿ ಬೈಯುತ್ತಾಳೆ ಎಂದು ಪೊಲೀಸರ ಎದುರು ಕಥೆ ಕಟ್ಟಿದ್ದಾನೆ.

ದಿನೇಶ್​ ಪೊಲೀಸರ ಎದುರು ಕಥೆ ಕಟ್ಟಿದ್ದೇನು

ದಿನೇಶ್ ಸುಬ್ಬಾ (30) ಅವರು ಹೋಟೆಲ್​​ನಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಆಗಸ್ಟ್ 16ರಂದು ಸಹೋದರ ಹಾಗೂ ಸ್ನೇಹಿತನೊಂದಿಗೆ ಊಟ ಮಾಡಿಕೊಂಡು ವಾಪಸ್ ಬರುತ್ತಿದ್ದರು. ಈ ವೇಳೆ ಬೈಕ್​​ನಲ್ಲಿ ಬಂದ ಮೂವರು ವ್ಯಕ್ತಿಗಳು ಚೂಪಾದ ವಸ್ತುವಿನಿಂದ ಇರಿದು ಹಲ್ಲೆ ನಡೆಸಿದ್ದರು.

ಭಾರತೀಯನೆಂದು ತಿಳಿದಿದ ನಂತರವೂ ಆರೋಪಿಗಳು ಹಲ್ಲೆ ಮುಂದುವರೆಸಿದ್ದರು. ಎಂದು ದಿನೇಶ್​ ಪೊಲೀಸರ ಮುಂದೆ ಹೇಳಿದ್ದರು. ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು. ಈ ವೇಳೆ ದಿನೇಶ್​​​ನನ್ನೂ ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಬಾಯಿ ಬಿಟ್ಟಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ತನ್ನ ಏರಿಯಾ ಬಿಟ್ಟು ಬೇರೆ ಏರಿಯಾದಲ್ಲಿ ಪ್ಯಾಸೆಂಜರ್ ಪಿಕ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ

​ಕುಡಿದ ಮತ್ತಿನಲ್ಲಿ ದಿನೇಶ್ ಮಧ್ಯರಾತ್ರಿ 12 ಗಂಟೆ ಅಂಗಡಿಯೊಂದರ ಮೇಲತ್ತಲು ಯತ್ನಿಸಿದ್ದಾನೆ. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಿದ್ದು ಸ್ವಲ್ಪ ಹೊತ್ತಿನ ನಂತರ ಈತನನ್ನು ನೋಡಿದ ಪಕ್ಕದ ಅಪಾರ್ಟ್ಮೆಂಟ್​ನ ಸೆಕ್ಯೂರಿಟಿ ಪೊಲೀಸರಿಗೆ ಕರೆ ಮಾಡಿದ್ದಾರೆ ಅಂತ ಹೇಳಿದ್ದಾನೆ. ಸತ್ಯ ಸಂಗತಿ ಬಯಲಾದ ಬಳಿಕ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ದಿನೇಶ್​ಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:39 am, Sun, 20 August 23

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ