AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ದೇಶದಲ್ಲೇ No.1 ಕೊರೊನಾ ಹಾಟ್​ಸ್ಪಾಟ್: ಸಿಲಿಕಾನ್ ಸಿಟಿ ಬೆಂಗಳೂರು!

ಬೆಂಗಳೂರು: ಇಡೀ ಪ್ರಪಂಚವನ್ನೇ ತನ್ನ ಕರಿಛಾಯೆಯಿಂದ ಆವರಿಸಿರುವ ಕೊರೊನಾ ರಾಜಧಾನಿ ಬೆಂಗಳೂರಿನಲ್ಲೂ ರಣಕೇಕೆ ಹಾಕ್ತಿದೆ. ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಹೆಚ್ಚಾಗ್ತಿದ್ದು ಅದನ್ನ ಹೆಡೆಮುರಿ ಕಟ್ಟುವುದು ಕಷ್ಟಸಾಧ್ಯವಾಗಿದೆ. ಈ ನಡುವೆ ರಾಜಧಾನಿ ಬೆಂಗಳೂರು ದೇಶದಲ್ಲೇ ನಂಬರ್ 1 ಕೊರೊನಾ ಹಾಟ್​ಸ್ಪಾಟ್ ಆಗಿ ಮಾರ್ಪಾಟಾಗಿದೆ. ಸೋಂಕಿತರ ಸಂಖ್ಯೆ ದಿನಕ್ಕೆ 5 ಸಾವಿರದ ಗಡಿ ದಾಟಿರುವ ದೇಶದ ಮೊದಲ ನಗರ ಎಂಬ ಅಪಖ್ಯಾತಿಗೆ ಬೆಂಗಳೂರು ಭಾಜನವಾಗಿದೆ. ಹೌದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಬೆಂಗಳೂರು ಪ್ರಥಮ […]

ಇಡೀ ದೇಶದಲ್ಲೇ No.1 ಕೊರೊನಾ ಹಾಟ್​ಸ್ಪಾಟ್: ಸಿಲಿಕಾನ್ ಸಿಟಿ ಬೆಂಗಳೂರು!
KUSHAL V
|

Updated on: Oct 09, 2020 | 8:44 AM

Share

ಬೆಂಗಳೂರು: ಇಡೀ ಪ್ರಪಂಚವನ್ನೇ ತನ್ನ ಕರಿಛಾಯೆಯಿಂದ ಆವರಿಸಿರುವ ಕೊರೊನಾ ರಾಜಧಾನಿ ಬೆಂಗಳೂರಿನಲ್ಲೂ ರಣಕೇಕೆ ಹಾಕ್ತಿದೆ. ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಹೆಚ್ಚಾಗ್ತಿದ್ದು ಅದನ್ನ ಹೆಡೆಮುರಿ ಕಟ್ಟುವುದು ಕಷ್ಟಸಾಧ್ಯವಾಗಿದೆ.

ಈ ನಡುವೆ ರಾಜಧಾನಿ ಬೆಂಗಳೂರು ದೇಶದಲ್ಲೇ ನಂಬರ್ 1 ಕೊರೊನಾ ಹಾಟ್​ಸ್ಪಾಟ್ ಆಗಿ ಮಾರ್ಪಾಟಾಗಿದೆ. ಸೋಂಕಿತರ ಸಂಖ್ಯೆ ದಿನಕ್ಕೆ 5 ಸಾವಿರದ ಗಡಿ ದಾಟಿರುವ ದೇಶದ ಮೊದಲ ನಗರ ಎಂಬ ಅಪಖ್ಯಾತಿಗೆ ಬೆಂಗಳೂರು ಭಾಜನವಾಗಿದೆ. ಹೌದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಬೆಂಗಳೂರು ಪ್ರಥಮ ಸ್ಥಾನದಲ್ಲಿದೆ.

ಕೊರೊನಾ ರಣಕೇಕೆಯಲ್ಲಿ ದೆಹಲಿ, ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ಸೇರಿದಂತೆ ದೇಶದ ಪ್ರಮುಖ ಸಿಟಿಗಳನ್ನ ನಮ್ಮ ಬೆಂದಕಾಳೂರು ಹಿಂದಿಕ್ಕಿದೆ. ದೇಶದ ಬೇರೆ ಸಿಟಿಗಳಲ್ಲಿ ದಿನಕ್ಕೆ 2 ರಿಂದ 3 ಸಾವಿರದಷ್ಟು ಕೇಸ್ ಪತ್ತೆಯಾಗುತ್ತಿದ್ರೇ ನಮ್ಮ ಸಿಲಿಕಾನ್​ ಸಿಟಿಯಲ್ಲಿ ಮಾತ್ರ ದಿನಕ್ಕೆ ಐದು ಸಾವಿರದಷ್ಟು ಕೊರೊನಾ ಕೇಸ್ ವರದಿಯಾಗ್ತಿದೆ.

ಈ ಹಿಂದೆ, ಮೂರು ಸಾವಿರದ ಆಸುಪಾಸಿನಲ್ಲಿದ್ದ ಸೋಂಕಿತರ ಸಂಖ್ಯೆ 5 ಸಾವಿರಕ್ಕೆ ಏರಿಕೆಯಾಗಿದೆ. ಇನ್ನು ಮುಂಬರುವ ತಿಂಗಳಲ್ಲಿ ಚಳಿಗಾಲ ಇರುವುದರಿಂದ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ. ಹಾಗಾಗಿ, ಬೆಂಗಳೂರಿಗರು ಎಚ್ಚರ ವಹಿಸದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ತಜ್ಞರು ಹೇಳಿದ್ದಾರೆ.

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್