
ದಕ್ಷಿಣ ಕನ್ನಡ: ಈಜಲು ನದಿಗೆ ಇಳಿದ ಮೂವರು ಯುವಕರಲ್ಲಿ ಓರ್ವ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಮಂಗಳೂರಿನ ಕಿನ್ನಿಗೋಳಿ ಸಮೀಪದ ಕರ್ನಿರೆಯಲ್ಲಿ ನಡೆದಿದೆ.
ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಹೊರಬರಲಾಗದೆ ಪರದಾಡಿದ 32 ವರ್ಷದ ಅನಿಲ್ ಮುಳುಗಿ ಸಾವನ್ನಪ್ಪಿದ್ದಾನೆ. ಉಳಿದ ಇಬ್ಬರನ್ನು ಸಾರ್ವಜನಿಕರು ರಕ್ಷಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಮುಲ್ಕಿ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.