
ಬೀದರ್: ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಈ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಸದ್ಯ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಹಾಲಹಳ್ಳಿಯ ಕಾರಂಜಾ ಜಲಾಶಯ ಭರ್ತಿಯಾಗಿದೆ. 4 ವರ್ಷದ ಬಳಿಕ ಜೀವನಾಡಿ ಡ್ಯಾಂ ಭರ್ತಿಯಾಗಿದೆ.
7.691 ಟಿಎಂಸಿ ಸಾಮರ್ಥ್ಯದ ಕಾರಂಜಾ ಡ್ಯಾಂ ಭರ್ತಿಯಾಗಿ ಮೂರು ಕ್ರಸ್ಟ್ ಗೇಟ್‌ಗಳ ಮೂಲಕ 1262.00 ಕ್ಯೂಸೆಕ್ ನೀರು ಹೊರಕ್ಕೆ ಹರಿದಿದೆ. ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನಿಡಿದೆ.