AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?

ಕಲರ್ಸ್​ ಕನ್ನಡ ವಾಹಿನಿ ಇಂದು ಇನ್​ಸ್ಟಾಗ್ರಾಂ ಖಾತೆಯಲ್ಲಿ ಪ್ರೋಮೋ ಒಂದನ್ನು ಪೋಸ್ಟ್​ ಮಾಡಿದೆ. ಈ ಪ್ರೋಮೋದಲ್ಲಿ ಶಮಂತ್​ ಅವರ ಚಿನ್ನದಂಥಾ ಕೂದಲನ್ನು ಮಂಜು ಪಾವಗಡ ಕತ್ತರಿಸಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?
ಶಮಂತ್​ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on:Mar 23, 2021 | 12:34 PM

Share

ಶಮಂತ್​ ಬ್ರೋ ಗೌಡ ಬಿಗ್​ ಬಾಸ್​ ಸೀಸನ್​ 8ರ ವೇದಿಕೆ ಏರಿದಾಗ ಅವರ ಕೂದಲನ್ನು ನೋಡಿ ಕಿಚ್ಚ ಸುದೀಪ್​ ಅಚ್ಚರಿ ವ್ಯಕ್ತಪಡಿಸಿದ್ದರು. ಇದು ವಿಗ್​ ಅಥವಾ ನಿಜವಾದ ಕೂದಲಾ ಎಂದು ಪ್ರಶ್ನೆ ಮಾಡಿದ್ದರು. ಬಿಗ್​ ಬಾಸ್​ ಮನೆ ಸೇರಿದ ನಂತರವೂ ಶಮಂತ್​ ತಮ್ಮ ಕೂದಲು ಹಾಗೂ ಗಡ್ಡದ ಮೂಲಕವೇ ಎಲ್ಲರ ಗಮನ ಸೆಳೆದಿದ್ದರು. ಆದರೆ, ಈಗ ಅವರ ಕೂದಲಿಗೆ ಕತ್ತರಿ ಬಿದ್ದಿದೆ! ಇದು ಶಮಂತ್​ಗೆ ನೀಡಿದ ಹೊಸ ಪನಿಶ್​ಮೆಂಟಾ ಎಂದು ಪ್ರೇಕ್ಷಕರು ಕೇಳಿಕೊಳ್ಳುತ್ತಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಇಂದು ಇನ್​ಸ್ಟಾಗ್ರಾಂ ಖಾತೆಯಲ್ಲಿ ಪ್ರೋಮೋ ಒಂದನ್ನು ಪೋಸ್ಟ್​ ಮಾಡಿದೆ. ಈ ಪ್ರೋಮೋದಲ್ಲಿ ಶಮಂತ್​ ಅವರ ಚಿನ್ನದಂಥಾ ಕೂದಲನ್ನು ಮಂಜು ಪಾವಗಡ ಕತ್ತರಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ನೀನು ಪೂರ್ತಿ ಕೂದಲನ್ನೇ ತೆಗೆದು ಹಾಕುತ್ತೀಯಾ ಎಂದು ಶುಭಾ ಪೂಂಜಾ ಎಚ್ಚರಿಕೆ ನೀಡುವ ಕೆಲಸ ಮಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ಮಂಜು, ಕೂದಲು ಕಟ್​ ಮಾಡಿಸಿಕೊಳ್ಳುವವನೇ ಸುಮ್ಮನಿದ್ದಾನೆ, ನಿಮ್ಮದೇನು? ನಿಜ ಹೇಳಬೇಕೆಂದರೆ ನನಗೂ ಇದು ಹೊಸತು ಎಂದು ಹೇಳಿದ್ದಾರೆ. ಕೊನೆಯಲ್ಲಿ ಮಾತನಾಡಿರುವ ಅರವಿಂದ್​, ಮಂಜು ಒಂದೇ ಗಂಟೆಗೆ ಮಶ್ರೂಂ ಆಗಿ ಬಿಟ್ಟರು ಎಂದು ನಕ್ಕಿದ್ದಾರೆ……

ಇನ್ನು, ಶಮಂತ್​ಗೆ ಬಿಗ್​ ಬಾಸ್​ ಶಿಕ್ಷೆ ನೀಡಿದೆಯಾ ಎನ್ನುವ ಅನುಮಾನ ಕೂಡ ಮೂಡಿದೆ. ಕಳೆದ ವಾರ ಶಮಂತ್​ ನೇರವಾಗಿ ನಾಮಿನೇಟ್​ ಆಗಬೇಕು ಇಲ್ಲವೇ ಮನೆ ಮಂದಿಯೆಲ್ಲ ಬೆಡ್​ರೂಂ ಬಿಟ್ಟುಕೊಡಬೇಕು ಎಂದು ಹೇಳಿದ್ದರು. ಆದರೆ, ಶಮಂತ್​ ಅವರನ್ನು ಸೇವ್​ ಮಾಡಲು ಹೋಗಿ ಮನೆ ಮಂದಿಯೆಲ್ಲ ಕಷ್ಟ ಅನುಭವಿಸಿದ್ದರು. ಈಗ ಈವಾರವೂ ಅದೇ ರೀತಿ ಶಮಂತ್​ಗೆ ಏನಾದರೂ ಪನಿಶ್​ಮೆಂಟ್​ ನೀಡಲಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ…..

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು

Published On - 7:03 pm, Mon, 22 March 21

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು