AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಪ್ಲೇ ಆಗಲೇ ಇಲ್ಲ ಗುಡ್​ ಮಾರ್ನಿಂಗ್​ ಸಾಂಗ್; ಇದಕ್ಕೆ ಕಾರಣ ಮಾತ್ರ ವಿಚಿತ್ರ!

ಬಿಗ್​ ಬಾಸ್​ ಮನೆಯಲ್ಲಿ 11ನೇ ದಿನ ಯಾವುದೇ ಹಾಡು ಪ್ಲೇ ಆಗೇ ಇಲ್ಲ. ಇದನ್ನು ನೋಡಿ ಮನೆ ಮಂದಿ ತುಂಬಾನೇ ಅಚ್ಚರಿ ಮತ್ತು ಭಯಗೊಂಡಿದ್ದಾರೆ!

ಬಿಗ್​ ಬಾಸ್​ ಮನೆಯಲ್ಲಿ ಪ್ಲೇ ಆಗಲೇ ಇಲ್ಲ ಗುಡ್​ ಮಾರ್ನಿಂಗ್​ ಸಾಂಗ್; ಇದಕ್ಕೆ ಕಾರಣ ಮಾತ್ರ ವಿಚಿತ್ರ!
ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 11, 2021 | 9:47 PM

Share

ಕನ್ನಡ ಹಾಡಿನ ಮೂಲಕ ಬಿಗ್​ ಬಾಸ್​ ಮನೆಯಲ್ಲಿ ಮುಂಜಾನೆ ಆರಂಭವಾಗುತ್ತದೆ. ಆದರೆ, ಬಿಗ್​ ಬಾಸ್​ ಮನೆಯಲ್ಲಿ 11ನೇ ದಿನ ಯಾವುದೇ ಹಾಡು ಪ್ಲೇ ಆಗೇ ಇಲ್ಲ. ಇದನ್ನು ನೋಡಿ ಮನೆ ಮಂದಿ ತುಂಬಾನೇ ಅಚ್ಚರಿ ಮತ್ತು ಭಯಗೊಂಡಿದ್ದಾರೆ! ಇಷ್ಟಕ್ಕೆಲ್ಲ ಕಾರಣ ಏನು ಎನ್ನುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಬಿಗ್​ ಬಾಸ್​ ಎರಡನೇ ವಾರದಲ್ಲಿ ನೀಡಲಾಗಿದ್ದ ಕಠಿಣ ಟಾಸ್ಕ್​ ಅನ್ನು ಯಶಸ್ವಿಗೊಳಿಸಲು ಮನೆಯ ಸದಸ್ಯರು ವಿಫಲರಾಗಿದ್ದರು. ಹಾಯಾಗಿ, ನಗು ನಗುತ್ತ ಆಡಬೇಕಿದ್ದ ಟಾಸ್ಕ್​ನಲ್ಲಿ ಒಬ್ಬರಿಗೊಬ್ಬರು ಕಿತ್ತಾಟ ಮಾಡಿಕೊಂಡು, ಪರಸ್ಪರ ದ್ವೇಷ ಬೆಳೆಸಿಕೊಂಡಿದ್ದರು. ಇದಕ್ಕೆ ಸಿಟ್ಟಾದ ಬಿಗ್​ ಬಾಸ್​ ಟಾಸ್ಕ್ ಕ್ಯಾನ್ಸಲ್​ ಮಾಡಿದ್ದಾರೆ. ಇದಕ್ಕೆ ಮನೆ ಮಂದಿಗೆ ಸೂಕ್ತ ಶಿಕ್ಷೆ ನೀಡುತ್ತಿದ್ದಾರೆ ಬಿಗ್​ ಬಾಸ್​.

ಬಿಗ್​ ಬಾಸ್ ಮನೆಯಲ್ಲಿ ವೈರಸ್​ ಹಾಗೂ ಮನುಷ್ಯರು ಎನ್ನುವ ಆಧಾರದ ಮೇಲೆ ಟಾಸ್ಕ್​ ನೀಡಲಾಗಿತ್ತು. ಮನೆಯ ಒಂದಷ್ಟು ಸದಸ್ಯರು ವೈರಸ್​ ಆದರೆ, ಮತ್ತೊಂದಷ್ಟು ಸದಸ್ಯರು ಮನುಷ್ಯರು. ವೈರಸ್​ ತಂಡಕ್ಕೆ ಪ್ರಶಾಂತ್​ ಸಂಬರಗಿ ಕ್ಯಾಪ್ಟನ್​. ಮನುಷ್ಯರ ತಂಡಕ್ಕೆ ಲ್ಯಾಗ್​ ಮಂಜು ನಾಯಕರಾಗಿದ್ದರು. ವೈರಸ್​ ದಾಳಿಗೆ ತುತ್ತಾಗದಂತೆ ಮನುಷ್ಯರು ಎಚ್ಚರವಿರಬೇಕು. ವೈರಸ್​ ತಂಡ ಮಾಡುವ ದಾಳಿಯಿಂದ ತಪ್ಪಿಸಿಕೊಳ್ಳಬೇಕು. ಇದು ಸಾಧ್ಯವಾಗದೆ ಇದ್ದರೆ ಮನುಷ್ಯ ತಂಡದ ಒಬ್ಬ ಸದಸ್ಯ ಕ್ವಾರಂಟೈನ್​ ಆಗಬೇಕು. ಕ್ವಾರಂಟೈನ್​ ಅವಧಿ ಅರ್ಧ ಗಂಟೆ. ಈ ವೇಳೆ ಮನುಷ್ಯ ತಂಡದವರು ಹಗ್ಗ ಹಿಡಿದು ನಿಲ್ಲಬೇಕು. ಆಗ ವೈರಸ್​ ತಂಡದವರು ತೊಂದರೆ ನೀಡಬೇಕು. ಆದರೆ, ಬಾಡಿ ಟಚ್​ ಮಾಡುವಂತಿಲ್ಲ. ಒಂದೊಮ್ಮೆ, ಕ್ವಾರಂಟೈನ್​ನಲ್ಲಿರುವವರು ಹಗ್ಗವನ್ನು ಕೈಬಿಟ್ಟರೆ ಅವರು ಸೋತಂತೆ. ಅವರು ಈ ಆಟದಿಂದ ಹೊರಗಿರಬೇಕು. ಕೊನೆಯಲ್ಲಿ ಯಾವ ತಂಡದಲ್ಲಿ ಹೆಚ್ಚು ಜನರು ಉಳಿಯುತ್ತಾರೋ ಅವರೇ ಗೆದ್ದಂತೆ.

ಈ ಟಾಸ್ಕ್​​ನಲ್ಲಿ ಒಬ್ಬರಿಗೊಬ್ಬರು ಕಿತ್ತಾಡಿಕೊಂಡರು. ಕ್ರೀಡಾ ಸ್ಫೂರ್ತಿ ಮರೆತು ಪರಸ್ಪರ ದ್ವೇಷ ಬೆಳೆಸಿಕೊಂಡರು. ಇದಕ್ಕೆ ಬಿಗ್​ ಬಾಸ್​ ಸಿಟ್ಟಾಗಿ ಟಾಸ್ಕ್​ ರದ್ದುಗೊಳಿಸುವ ಘೋಷಣೆ ಮಾಡಿದ್ದರು. ಇದಾದ ಮರುದಿನವೇ ಬಿಗ್​ ಬಾಸ್​ ಮುಂಜಾನೆ ಸಾಂಗ್​ ಹಾಕಿಲ್ಲ. ಇದನ್ನು ನೋಡಿದ ಸ್ಪರ್ಧಿಗಳು ಬಿಗ್​ ಬಾಸ್​ ತುಂಬಾನೇ ಗರಂ ಆಗಿದ್ದಾರೆ ಎಂದಿದ್ದಾರೆ!

ಇದನ್ನೂ ಓದಿ: Bigg Boss Kannada : ಬಿಗ್​ ಬಾಸ್​ ಮನೆಯಲ್ಲಿ ದರ್ಶನ್​ ಹಾಡು ಯಾಕೆ ಪ್ಲೇ ಆಗಲ್ಲ? ಸುದೀಪ್​ಗೆ ಪ್ರಶ್ನೆ ಎಸೆದ ‘ಡಿ ಬಾಸ್’​ ಫ್ಯಾನ್ಸ್​!

Published On - 9:46 pm, Thu, 11 March 21

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ