ಬೈಕ್ನಲ್ಲಿ ತೆರಳುತ್ತಿರುವಾಗ ಖಾಸಗಿ ಬಸ್ಗೆ ಡಿಕ್ಕಿ: ಬಸ್ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು
ಬೈಕ್ನಲ್ಲಿ ತೆರಳುತ್ತಿರುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದ ಕಾರಣ ಬಸ್ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಮರಣ ಹೊಂದಿದ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ

ಸಾಂದರ್ಭಿಕ ಚಿತ್ರ
ನೆಲಮಂಗಲ: ಕುಣಿಗಲ್ ಮೂಲದ ಶಶಿಕಲಾ (50) ಮತ್ತು ಅವರ ಪತಿ ಗಂಗವೆಂಕಟಯ್ಯ ದಂಪತಿ ಬೈಕ್ನಲ್ಲಿ ಬ್ಯಾಡರಹಳ್ಳಿಗೆ ತೆರಳುತ್ತಿದ್ದಾಗ.. ಖಾಸಗಿ ಬಸ್ಗೆ ಬೈಕ್ ಡಿಕ್ಕಿ ಹೊಡೆದ ಕಾರಣ ಹಿಂಬದಿ ಕುಳಿತಿದ್ದ ಶಶಿಕಲಾ ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮರಣ ಹೊಂದಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದಾವರದ ನೈಸ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.
ಗಂಗವೆಂಕಟಯ್ಯ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ಕಾರಣವಾಗಿರುವ ಖಾಸಗಿ ಬಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು



