ಬೈಕ್‌ ನಿಲ್ಲಿಸಿ ಶಾಪಿಂಗ್‌ಗೆ ಹೋಗಿ ಬರುವಷ್ಟರಲ್ಲಿ ಬೈಕ್ ಮಾಯ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೈಕ್‌ಗಳ್ಳರ ಹಾವಳಿ ಮಿತಿಮೀರಿದೆ. ಶಾಪಿಂಗ್ ಕಾಂಪ್ಲೆಕ್ಸ್ ಮುಂದೆ ನಿಲ್ಲಿಸಿದ್ದ ಬೈಕ್ ಕೆಲವೇ ನಿಮಿಷಗಳಲ್ಲಿ ಕಳ್ಳತನವಾಗಿರುವ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಜನ ತಮ್ಮ ಬೈಕ್​ಗಳನ್ನು ಬಿಟ್ಟು ಹೋಗಲು ಆತಂಕ ಪಡುವಂತಾಗಿದೆ. ನಿನ್ನೆ ಭಾನುವಾರ ಮಧ್ಯಾಹ್ನ ಸುಮಾರು 2.20ರ ಸಮಯದಲ್ಲಿ ಸತೀಶ್ ಎಂಬುವವರು ಶಾಪಿಂಗ್ ಕಾಂಪ್ಲೆಕ್ಸ್ ಮುಂದೆ ತನ್ನ ಬೈಕ್ ನಿಲ್ಲಿಸಿ ಹೋಗಿದ್ದರು. ಶಾಪಿಂಗ್ ಮುಗಿಸಿ ಬಂದು ನೋಡಿದ್ರೆ ಬೈಕ್ ನಾಪತ್ತೆಯಾಗಿತ್ತು. ಸಿಸಿಟಿವಿ ಪರಿಶೀಲಿಸಿದಾಗ ಬೈಕ್ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ. ದೃಶ್ಯ ಸಿಸಿಟಿವಿಯಲ್ಲಿ ಸೆರೆ: […]

ಬೈಕ್‌ ನಿಲ್ಲಿಸಿ ಶಾಪಿಂಗ್‌ಗೆ ಹೋಗಿ ಬರುವಷ್ಟರಲ್ಲಿ ಬೈಕ್ ಮಾಯ
Follow us
ಆಯೇಷಾ ಬಾನು
|

Updated on: Oct 19, 2020 | 8:34 AM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೈಕ್‌ಗಳ್ಳರ ಹಾವಳಿ ಮಿತಿಮೀರಿದೆ. ಶಾಪಿಂಗ್ ಕಾಂಪ್ಲೆಕ್ಸ್ ಮುಂದೆ ನಿಲ್ಲಿಸಿದ್ದ ಬೈಕ್ ಕೆಲವೇ ನಿಮಿಷಗಳಲ್ಲಿ ಕಳ್ಳತನವಾಗಿರುವ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಜನ ತಮ್ಮ ಬೈಕ್​ಗಳನ್ನು ಬಿಟ್ಟು ಹೋಗಲು ಆತಂಕ ಪಡುವಂತಾಗಿದೆ.

ನಿನ್ನೆ ಭಾನುವಾರ ಮಧ್ಯಾಹ್ನ ಸುಮಾರು 2.20ರ ಸಮಯದಲ್ಲಿ ಸತೀಶ್ ಎಂಬುವವರು ಶಾಪಿಂಗ್ ಕಾಂಪ್ಲೆಕ್ಸ್ ಮುಂದೆ ತನ್ನ ಬೈಕ್ ನಿಲ್ಲಿಸಿ ಹೋಗಿದ್ದರು. ಶಾಪಿಂಗ್ ಮುಗಿಸಿ ಬಂದು ನೋಡಿದ್ರೆ ಬೈಕ್ ನಾಪತ್ತೆಯಾಗಿತ್ತು. ಸಿಸಿಟಿವಿ ಪರಿಶೀಲಿಸಿದಾಗ ಬೈಕ್ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ.

ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಯುವಕ ಚಾತುರತೆಯಿಂದ ತನ್ನ ಕೈ ಚಳಕ ತೋರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಸಿಸಿಟಿವಿ ಆಧರಿಸಿ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇತ್ತೀಚೆಗೆ ಕಳ್ಳರು ಜನನಿಬಿಡ ಪ್ರದೇಶವೇ ಆಗಲಿ, ಶಾಪಿಂಗ್ ಕಾಂಪ್ಲೆಕ್ಸ್ ಮುಂದೆಯಾಗಲಿ ಕ್ಷಣ ಮಾತ್ರದಲ್ಲಿ ಬೈಕ್​ಗಳನ್ನ ಎಗರಿಸುತ್ತಿದ್ದಾರೆ. ಹೀಗಾಗಿ ಜನ ಸದ್ಯ ಬೈಕ್ ನಿಲ್ಲಿಸಿ ಎಲ್ಲೇ ಹೋಗ್ಬೇಕಿದ್ರೂ ಯೋಚಿಸುವಂತಾಗಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್