ಹಾವೇರಿ: ತಾಲೂಕಿನ ಸೋಮನಕಟ್ಟಿ ಗ್ರಾಮದ ಬಳಿ ಚಲಿಸುತ್ತಿದ್ದ ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಟಿಪ್ಪರ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ವೀರನಗೌಡ ಪಾಟೀಲ (35) ಎಂಬಾತ ಮೃತ ದುರ್ದೈವಿ. ಅಪಘಾತ ಸಂಭವಿಸಿದ ಬಳಿಕ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ನಂತರ ಟಿಪ್ಪರ್ ಚಾಲಕ, ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಗುತ್ತಲ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಿದ್ರೆಯ ಮಂಪರು: ಮಾಜಿ ಶಾಸಕ ಅನಿಲ್ ಲಾಡ್ ರೇಂಜ್ ರೋವರ್ ಅಪಘಾತ
Published On - 11:33 am, Tue, 19 January 21