
ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕು ವ್ಯಾಪ್ತಿಯ ಹೊಸಹಳ್ಳಿ ಗೇಟ್ ಬಳಿ ಅತಿ ವೇಗದಿಂದ ಬರುತ್ತಿದ್ದ ಕಾರು ಬೈಕ್ ಡಿಕ್ಕಿಯಾಗಿದೆ. ಇದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತ ಸವಾರನನ್ನು ಹುಣಸನಾಳು ಗ್ರಾಮದ ಮಹದೇವಶೆಟ್ಟಿ(50) ಎಂದು ಗುರುತಿಸಲಾಗಿದೆ. ನಂಜನಗೂಡು-ಊಟಿ ರಸ್ತೆಯಲ್ಲಿರುವ ಹೊಸಹಳ್ಳಿ ಗೇಟ್ ಬಳಿ ಘಟನೆ ಸಂಭವಿಸಿದೆ. ನಂಜನಗೂಡಿನ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.