Youtube ​ನಲ್ಲಿ ಜಯಚಾಮರಾಜ ಒಡೆಯರ್ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

ಮೈಸೂರು: ಎಲ್ಲೆಡೆ ಕೊರೊನಾ ವೈರಸ್ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಯೂಟ್ಯೂಬ್ ಮೂಲಕ ಹಿಸ್ ಹೈನೆಸ್ ಮಹಾರಾಜ ಜಯಚಾಮರಾಜ ಒಡೆಯರ್ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮವನ್ನು ನೆರವೇರಿಸಲು ನಿರ್ಧರಿಸಲಾಗಿದೆ. ರಾಜಮಾತೆ ಡಾ. ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಶನ್ ವತಿಯಿಂದ ಕಾರ್ಯಕ್ರಮ ಆಚರಿಸಲಾಗುತ್ತೆ. ಇದೇ ತಿಂಗಳ 18ರಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಮಾರೋಪ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಕೇಂದ್ರ ಮಾಜಿ ಸಚಿವ ಡಾ. ಕರಣ್ ಸಿಂಗ್, ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಸೇರಿ ಹಲವು […]

Youtube ​ನಲ್ಲಿ ಜಯಚಾಮರಾಜ ಒಡೆಯರ್ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ
Ayesha Banu

| Edited By: sadhu srinath

Jul 14, 2020 | 9:41 AM

ಮೈಸೂರು: ಎಲ್ಲೆಡೆ ಕೊರೊನಾ ವೈರಸ್ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಯೂಟ್ಯೂಬ್ ಮೂಲಕ ಹಿಸ್ ಹೈನೆಸ್ ಮಹಾರಾಜ ಜಯಚಾಮರಾಜ ಒಡೆಯರ್ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮವನ್ನು ನೆರವೇರಿಸಲು ನಿರ್ಧರಿಸಲಾಗಿದೆ.

ರಾಜಮಾತೆ ಡಾ. ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಶನ್ ವತಿಯಿಂದ ಕಾರ್ಯಕ್ರಮ ಆಚರಿಸಲಾಗುತ್ತೆ. ಇದೇ ತಿಂಗಳ 18ರಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಮಾರೋಪ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.

ಕೇಂದ್ರ ಮಾಜಿ ಸಚಿವ ಡಾ. ಕರಣ್ ಸಿಂಗ್, ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಎಲ್ಲರಿಗೂ ಸಾಮಾಜಿಕ ಜಾಲತಾಣದ ಮೂಲಕವೇ ಆಹ್ವಾನ ಪತ್ರಿಕೆ ನೀಡಲಾಗಿದೆ. Youtube ಮೂಲಕ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಅವಕಾಶ ಮಾಡಲಾಗುತ್ತಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada